ETV Bharat / state

ಕುಂದಗೋಳ ಉಪ ಚುನಾವಣೆ: ಕೈ ನಾಯಕರಿಂದ ಚರ್ಚೆ

ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಡಿ.ಕೆ ಶಿವಕುಮಾರ್ ,ಕೆ.ಸಿ ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡುರಾವ್ ಮಾತುಕತೆ ನಡೆಸಿದ್ರು.

author img

By

Published : May 12, 2019, 10:01 PM IST

Updated : May 12, 2019, 10:16 PM IST

ಕೈ ನಾಯಕರ ಮೀಟಿಂಗ್

ಹುಬ್ಬಳ್ಳಿ : ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ‌ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಮಾತುಕತೆ ನಡೆಸಿದ್ರು.

ನಗರದ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾದ ನಾಯಕರು ಕುಂದಗೋಳ ಉಪ ಚುನಾವಣೆ ಕುರಿತಂತೆ ಚರ್ಚೆ ನಡೆಸಿದರು. ಕುಂದಗೋಳ‌ ಉಪ ಚುನಾವಣೆ ಉಸ್ತುವಾರಿ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್​ ಅವರಿಂದ ಮಾಹಿತಿ‌ ಪಡೆದ ಕೆ.ಸಿ ವೇಣುಗೋಪಾಲ್ ಮೈತ್ರಿ ಪಕ್ಷದ ಅಭ್ಯರ್ಥಿ ಕುಸುಮ ಶಿವಳ್ಳಿ ಗೆಲುವಿಗೆ ನಾಯಕರು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಬೇಕು. ಕಾರ್ಯಕರ್ತರಲ್ಲಿ ಹಾಗೂ ಜೆಡಿಎಸ್ ನಾಯಕರಲ್ಲಿ ಸಮನ್ವಯತೆ ಕಾಯ್ದುಕೊಂಡು ಕುಸುಮ ಶಿವಳ್ಳಿ ಗೆಲುವಿಗೆ ಶ್ರಮಿಸುವಂತೆ ಸಲಹೆ ನೀಡಿದರು.

ನಂತರ ಸಚಿವ ಶಿವಕುಮಾರ್​ ನೂಲ್ವಿಯಲ್ಲಿ ಆಯೋಜಿಸಿರುವ ಸಮಾವೇಶಕ್ಕೆ ತೆರಳಿದ್ರು. ವೇಣುಗೋಪಾಲ್ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ರು.

sample description
Last Updated : May 12, 2019, 10:16 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.