ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೊಳಿಸಿದ ಭೂಸುಧಾರಣಾ ಕಾಯಿದೆ ತಿದ್ದುಪಡಿ ವಿರೋಧಿಸಿ ಕುಂದಗೋಳ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕುಂದಗೋಳ ಗಾಳಿ ದುರ್ಗಮ್ಮ ಗುಡಿಯಿಂದ ಕುಂದಗೋಳ ತಹಶೀಲ್ದಾರ ಕಚೇರಿಯವರೆಗೂ ರ್ಯಾಲಿ ಮುಖಾಂತರ ಪ್ರತಿಭಟನೆ ನಡೆಸಿದ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಸರ್ಕಾರ ಜಾರಿಗೊಳಿಸಿದ ಕಾಯಿದೆಯಿಂದ ಸಣ್ಣ ಹಾಗೂ ಅತೀ ಸಣ್ಣ ರೈತರು ಭೂಮಿ ಕಳೆದುಕೊಳ್ಳುವುದು ಖಂಡಿತ, ದಲ್ಲಾಳಿಗಳು ಹಾಗೂ ರೀಯಲ್ ಎಸ್ಟೇಟ್ ಉದ್ಯಮಿಗಳು ರೈತರಿಗೆ ಹಣದ ಆಮಿಷ ತೋರಿಸಿ ರೈತರ ಭೂಮಿಯನ್ನು ಕಬಳಿಸಲಿದ್ದಾರೆ ಎಂದು ಆರೋಪಿಸಿದರು.
ಕೂಡಲೇ ರಾಜ್ಯ ಸರ್ಕಾರ ನಿರ್ಧಾರವನ್ನು ಕೈಬಿಡಬೇಕೆಂದು ಒತ್ತಾಯಿಸಿದರು. ನಂತರ ತಹಶೀಲ್ದಾರರ ಮುಖಾಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.