ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಸಂಶಿಯಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಪತಿಯನ್ನು ನೆನೆದು ಕುಸುಮಾ ಶಿವಳ್ಳಿಯವರು ಕಣ್ಣೀರು ಹಾಕಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿರುವುದು ಕಾರ್ಯಕರ್ತರ ಮನ ಕಲುಕಿತು. ಬಹಿರಂಗ ಸಭೆಯಲ್ಲಿ ನೂರಾರು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಸಭೆಯಲ್ಲಿ ಶಿವಳ್ಳಿ ಪರ ಕಾರ್ಯಕರ್ತರು ಘೋಷಣೆ ಕೂಗಿದರು. ಸಭೆಯಲ್ಲಿ ಕುಂದಗೋಳ ವಿಧಾನಸಭಾ ಕ್ಷೇತ್ರದ ಜನರು, ಶಿವಳ್ಳಿಯವರ ನಿಧನಕ್ಕೆ ಅತೀವ ಸಂತಾಪ ಸೂಚಿಸಿದರು.