ಧಾರವಾಡ : ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗೆ ಹೆಚ್ಚಿಸಿದ್ದರಿಂದ ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಜಂಟಿ ಸಮಿತಿ ಸದಸ್ಯರು, ಆದೇಶ ಪ್ರತಿ ದಹಿಸಿ, ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾ ವೈರಸ್ ಸಂದರ್ಭದಲ್ಲಿ ದುಡಿಯುವ ಜನತೆಯ ಪರ ನಿಲ್ಲುವ ಬದಲಾಗಿ ಸರ್ಕಾರ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿದೆ. ಎಂಟು ಗಂಟೆಗಳ ದುಡಿಮೆಯ ಹಕ್ಕನ್ನು ಮೊಟಕುಗೊಳಿಸಲಾಗಿದೆ ಎಂದು ದೂರಿದರು.
ಕೈಗಾರಿಕಾ ಪತಿಗಳ ತಾಳಕ್ಕೆ ತಕ್ಕಂತೆ ಸರ್ಕಾರಗಳು ಕುಣಿಯುತ್ತಿವೆ. ಕಾಯ್ದೆಯ ವಿರುದ್ದ ಹೋರಾಡಲು ಕಾರ್ಮಿಕ ವರ್ಗದ ಜನರು ಸಜ್ಜಾಗಬೇಕು ಎಂದು ಮನವಿ ಮಾಡಿದರು.