ETV Bharat / state

ಜ.15ರಂದು ಹುಬ್ಬಳ್ಳಿಯಲ್ಲಿ ಫ್ಲೈ ಓವರ್‌ ನಿರ್ಮಾಣಕ್ಕೆ ಭೂಮಿಪೂಜೆ: ಪ್ರಹ್ಲಾದ್​ ​​ಜೋಶಿ - construction of flyover at hubli

ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಬಹುನಿರೀಕ್ಷಿತ ಫ್ಲೈ ಓವರ್‌ ನಿರ್ಮಾಣ ಕಾಮಗಾರಿಗೆ ಜ. 15ರಂದು ಸಚಿವ ನಿತಿನ್ ಗಡ್ಕರಿ ವರ್ಚುಯಲ್‌ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ತಿಳಿಸಿದರು.

Land worship for construction of flyover at Hubli on January 15th
ಜ.15ರಂದು ಹುಬ್ಬಳ್ಳಿಯಲ್ಲಿ ಫ್ಲೈ ಓವರ್‌ ನಿರ್ಮಾಣಕ್ಕೆ ಭೂಮಿಪೂಜೆ: ಪ್ರಲ್ಹಾದ ಜೋಶಿ
author img

By

Published : Jan 12, 2021, 12:09 PM IST

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಹೃದಯ ಭಾಗವಾದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಬಹುನಿರೀಕ್ಷಿತ ಫ್ಲೈ ಓವರ್‌ ನಿರ್ಮಾಣ ಕಾಮಗಾರಿಗೆ ಜ. 15ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವರ್ಚುವಲ್‌ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ತಿಳಿಸಿದರು.

Land worship for construction of flyover at Hubli on January 15th
ಐಆರ್‌ಸಿಟಿಸಿ ಕ್ಯಾಂಟೀನ್‌ ಉದ್ಘಾಟನೆ

ನಗರದ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ ಮೊದಲ ಪ್ಲಾಟ್‌ಫಾರ್ಮ್‌ನಲ್ಲಿ ಐಆರ್‌ಸಿಟಿಸಿ ಕ್ಯಾಂಟೀನ್‌ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, 300 ಕೋಟಿ ರೂ. ಮೊತ್ತದ ಕಾಮಗಾರಿ ಇದಾಗಿದ್ದು, ಗಬ್ಬೂರು ಕ್ರಾಸ್‌ವರೆಗೆ ವಿಸ್ತರಣೆ ಮಾಡಬೇಕು ಎನ್ನುವ ಆಸೆ ನನ್ನದು. ಇದಕ್ಕೆ ಅಂದಾಜು 100 ಕೋಟಿ ರೂ. ಹಣ ಹೆಚ್ಚುವರಿಯಾಗಿ ಖರ್ಚಾಗಲಿದೆ. ಮಹಾನಗರ ಪಾಲಿಕೆ, ಹುಡಾ ಮತ್ತು ಸ್ಥಳೀಯ ಸಂಸ್ಥೆಗಳಿಂದ 50 ಕೋಟಿ ಹೊಂದಿಸಿಕೊಂಡು, ಇನ್ನುಳಿದ 50 ಕೋಟಿ ರೂ. ಹಣ ಸಾಲ ಪಡೆಯಲು ಯೋಜನೆ ರೂಪಿಸಲಾಗುತ್ತಿದೆ ಎಂದರು.

ಈ ಸುದ್ದಿಯನ್ನೂ ಓದಿ: ‘ಮೇಸ್ಟ್ರಾದ ಮಿನಿಸ್ಟರ್’ - ಮಕ್ಕಳಿಂದ ಮಗ್ಗಿ ಒಪ್ಪಿಸಿಕೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್

ಅದೇ ದಿನ ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ 27 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್‌ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಭೂಮಿಪೂಜೆ ನೆರವೇರಿಸಲಿದ್ದಾರೆ. ಫ್ಲೈ ಓವರ್ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಸ್ಥಳೀಯವಾಗಿ ಡೆನಿಸನ್‌ ಹೋಟೆಲ್‌ನಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.