ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆಯನ್ನು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಕೇಂದ್ರದ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ನೆರವೇರಿಸಿದರು.
ನಗರದ ಚಿಟಗುಪ್ಪಿ ಹಾಗೂ ನೆಹರು ಮೈದಾನದಲ್ಲಿ ಭೂಮಿ ಪೂಜೆ ಸಲ್ಲಿಸಿ, ಸ್ಮಾರ್ಟ್ ಸಿಟಿ ಕಾರ್ಯಗಳು ಈಗಾಗಲೇ ಎಲ್ಲೆಡೆ ಆರಂಭವಾಗಿದೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಶಂಕರಪಾಟೀಲ ಮುನೇನಕೊಪ್ಪ, ಹು-ಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಸೇರಿದಂತೆ ಮುಂತಾದವರು ಇದ್ದರು.