ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ನಾಪಪತ್ರ ಸಲ್ಲಿಸಲು ಇಂದು ಕೊನೆಯ ದಿನವಾದ್ದರಿಂದ, ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಲು ತಮ್ಮ ಬೆಂಬಲಿಗರ ಜತೆ ಗುಂಪು ಗುಂಪಾಗಿ ಬಂದಿದ್ದರು. ಕೋವಿಡ್ ನಿಯಮ ಉಲ್ಲಂಘಿಸಿದ್ದರಿಂದ ಪೊಲೀಸರು, ಅವರನ್ನು ಪ್ರವೇಶದ್ವಾರದಲ್ಲಿಯೇ ಬ್ಯಾರಿಕೇಡ್ ಹಾಕಿ ತಡೆದರು.
ಈ ವೇಳೆ ಅಭ್ಯರ್ಥಿಗಳು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ನಾಮಪತ್ರ ಸಲ್ಲಿಸಲು ಪಕ್ಷ ಪ್ರತಿನಿಧಿಸುವ ಅಭ್ಯರ್ಥಿ ಜತೆ ನಾಲ್ಕ ಜನ ಹಾಗೂ ಸ್ವತಂತ್ರ ಅಭ್ಯರ್ಥಿ ಜತೆ ಐವರಿಗೆ ಮಾತ್ರ ಪ್ರವೇಶ ನೀಡಲಾಗಿದೆ.
ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಪೊಲೀಸರು ಧ್ವನಿವರ್ಧಕಗಳಲ್ಲಿ ಜಾಗೃತಿ ಮೂಡಿಸುತ್ತಿದ್ದರೂ ಸಹ ಪಕ್ಷದ ಕಾರ್ಯಕರ್ತರು ಮಾತ್ರ ಎಚ್ಚೆತ್ತುಕೊಳ್ಳಲಿಲ್ಲ. ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸಪಟ್ಟರು.
ಇದನ್ನೂ ಓದಿ: ಬೇಳೂರ್ಗೆ ಸರ್ಕಾರ ಪತನದ ಬಗ್ಗೆ ಸ್ವಪ್ನ ಬಿದ್ದಿರಬೇಕು: ಸಚಿವ ಹೆಬ್ಬಾರ್ ವ್ಯಂಗ್ಯ
ಅಭ್ಯರ್ಥಿಗಳ ಬೆಂಬಲಿಗರು ಹೆಚ್ಚಾಗಿ ಧಾವಿಸಿದ್ದರಿಂದ ಪಾಲಿಕೆ ಆವರಣ, ರೈಲ್ವೆ ಸ್ಟೇಷನ್ ಮುಂಭಾಗದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು.