ETV Bharat / state

ಹು-ಧಾ ಪಾಲಿಕೆ ಚುನಾವಣೆ ಫಲಿತಾಂಶ ಸಂಭ್ರಮ: ಪೊಲೀಸರಿಂದ ಬೆಂಬಲಿಗರಿಗೆ ಲಾಠಿ ರುಚಿ

ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಪ್ರಜಾಕೀಯ ಹಾಗು ಆಮ್ ಆದ್ಮಿ ಸೇರಿದಂತೆ ಇತರೆ ಪಕ್ಷಗಳ ಅಭ್ಯರ್ಥಿಗಳ ಬೆಂಬಲಿಗರು ಸಾಗರೋಪಾದಿಯಲ್ಲಿ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಮಾವಣೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿದ್ದು, ಪೊಲೀಸರು ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಲಾಠಿ ಬೀಸಬೇಕಾಯಿತು.

ಬೆಂಬಲಿಗರಿಗೆ ಲಾಠಿ ರುಚಿ
ಬೆಂಬಲಿಗರಿಗೆ ಲಾಠಿ ರುಚಿ
author img

By

Published : Sep 6, 2021, 6:39 PM IST

ಧಾರವಾಡ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹಣೆಪಟ್ಟಿ ಹೊಂದಿರುವ ಹು-ಧಾ ಪಾಲಿಕೆ ಚುನಾವಣೆ ಮತ ಎಣಿಕೆ ವೇಳೆ ಅಭ್ಯರ್ಥಿಗಳ ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.

ಬೆಂಬಲಿಗರಿಗೆ ಲಾಠಿ ರುಚಿ

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಪರವಾಗಿ ಸಂಭ್ರಮಾಚರಣೆಗೆ ನೆರೆದಿದ್ದ ಸಾವಿರಾರು ಬೆಂಬಲಿಗರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಪ್ರಜಾಕೀಯ, ಆಮ್ ಆದ್ಮಿ ಸೇರಿದಂತೆ ಇತರೆ ಅಭ್ಯರ್ಥಿಗಳ ಬೆಂಬಲಿಗರು ಸಾಗರೋಪಾದಿಯಲ್ಲಿ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಮಾವಣೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿದ್ದು, ಪೊಲೀಸರು ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಲಾಠಿ ಬೀಸಬೇಕಾಯಿತು.

ದ್ವಿಚಕ್ರ ವಾಹನ, ಕಾರು ಮೂಲಕ ಕೃಷಿ ವಿಶ್ವವಿದ್ಯಾಲಯಕ್ಕೆ ಆಗಮಿಸಿದ ಬೆಂಬಲಿಗರು, ಘೋಷಣೆ ಕೂಗುತ್ತಾ ವಾಹನ ಸಂಚಾರಕ್ಕೆ ಅಡ್ಡಿ ಉಂಟುಮಾಡಿದರು.

ಇದನ್ನೂ ಓದಿ: ಬಿಜೆಪಿಗೆ ಸಿಹಿ.. ಎಂಇಎಸ್​ ಪಾಲಿಗೆ ಕುಂದಾ ಕಹಿ.. ಬೆಳಗಾವಿಯಲ್ಲಿ ಯಶಸ್ವಿಯಾದ ಕಮಲಪಾಳಯದ ತಂತ್ರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.