ETV Bharat / state

ಶಾಲೆ ಬಳಿ ಚಿರತೆ ಪ್ರತ್ಯಕ್ಷ ಹಿನ್ನೆಲೆ ಅರಣ್ಯ ಇಲಾಖೆ ಸ್ಥಳದಲ್ಲೇ ಠಿಕಾಣಿ : ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ - leopard in hubli

ರಾಜನಗರದ ಕೇಂದ್ರೀಯ ವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರಿದಿದೆ. ಬೆಟ್ಟದ ಸಮೀಪದ ಜನತಾ ಪ್ರೌಢಶಾಲೆ ಹಾಗೂ ಶಿರಡಿ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿ ನೃಪತುಂಗ ಬೆಟ್ಟದ ಸುತ್ತಮುತ್ತಲಿನ ವಿವಿಧ 12 ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ..

leopard appears in hubli dc declared holiday for schools
ಚಿರತೆ ಪ್ರತ್ಯಕ್ಷ ಹಿನ್ನೆಲೆ ಮುಂದುವರಿದ ಕಾರ್ಯಾಚರಣೆ
author img

By

Published : Sep 21, 2021, 8:02 PM IST

ಹುಬ್ಬಳ್ಳಿ/ಧಾರವಾಡ : ಕೇಂದ್ರೀಯ ವಿದ್ಯಾಲಯದ ಬಳಿ ಚಿರತೆ ಪ್ರತ್ಯಕ್ಷವಾದ ಬೆನ್ನಲ್ಲೇ ಚಿರತೆ ಸೆರೆ ಕಾರ್ಯಾಚರಣೆ ಚುರುಕುಗೊಂಡಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹುಬ್ಬಳ್ಳಿ ನೃಪತುಂಗ ಬೆಟ್ಟದ ಬಳಿ ಕಾಣಿಸಿದ್ದ ಚಿರತೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಇದೀಗ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಜಮೀನಿನಲ್ಲಿ ಚಿರತೆ ಕಾಣಿಸಿದೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಈ ಹಿನ್ನೆಲೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ‌‌‌. ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಕಾಣಿಸಿದ್ದು ಅದೇ ಚಿರತೆ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಚಿರತೆ ಪ್ರತ್ಯಕ್ಷ ಹಿನ್ನೆಲೆ ಮುಂದುವರಿದ ಕಾರ್ಯಾಚರಣೆ

ಜಿಲ್ಲಾಧಿಕಾರಿ ಸಭೆ : ಕಳೆದ 4-5 ದಿನಗಳಿಂದ ಹುಬ್ಬಳ್ಳಿಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಅದನ್ನ ಸೆರೆ ಹಿಡಿಯುವ ಕಾರ್ಯಾಚರಣೆ ಕುರಿತು ಸ್ಥಳೀಯರು ಹಾಗೂ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಸಿದರು.

ಶಾಲಾ-ಕಾಲೇಜುಗಳಿಗೆ ರಜೆ : ರಾಜನಗರದ ಕೇಂದ್ರೀಯ ವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರಿದಿದೆ. ಬೆಟ್ಟದ ಸಮೀಪದ ಜನತಾ ಪ್ರೌಢಶಾಲೆ ಹಾಗೂ ಶಿರಡಿ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿ ನೃಪತುಂಗ ಬೆಟ್ಟದ ಸುತ್ತಮುತ್ತಲಿನ ವಿವಿಧ 12 ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ಕೇಂದ್ರೀಯ ವಿದ್ಯಾಲಯದಲ್ಲಿ ಈಗಾಗಲೇ ಭೌತಿಕ ಕ್ಲಾಸ್ ರದ್ದುಗೊಳಿಸಿ ಆದೇಶಿಸಿದೆ. ಅದರಂತೆ ನಾಳೆಯಿಂದ ಹುಬ್ಬಳ್ಳಿಯ ಜನತಾ ಪ್ರೌಢಶಾಲೆ ಹಾಗೂ ಶಿರಡಿನಗರ, ಚಾಮುಂಡೇಶ್ವರಿ ನಗರ, ಸಂತೋಷ ನಗರ, ಅಶೋಕನಗರ, ವಿಶ್ವೇಶ್ವರ ನಗರಗಳಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು, ವಿಶ್ವೇಶ್ವರ ನಗರದ ಸರ್ಕಾರಿ ಪ್ರೌಢಶಾಲೆ, ಜೆ ಕೆ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ, ಡಿ ಕೆ ಪಬ್ಲಿಕ್ ಸ್ಕೂಲ್, ಚೈತ್ರಾ ಕನ್ನಡ ಕಾನ್ವೆಂಟ್ ಪ್ರಾಥಮಿಕ ಮತ್ತು ಪ್ರೌಢಶಾಲೆ, ವಿ ಎಸ್ ಪಿಳ್ಳೆ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಎನ್ ಕೆ ಠಕ್ಕರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸೇರಿ ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯ 12 ಶಾಲೆಗಳಿಗೆ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಮುಗಿಯುವವರೆಗೆ ರಜೆ ಘೋಷಿಸಲಾಗಿದೆ. ಮತ್ತು ಶಾಲೆಗಳು ಪುನಾರಂಭವಾಗುವವರೆಗೆ ಶಾಲಾ ಮಕ್ಕಳ ಪಾಠ ಬೋಧನೆಯನ್ನು ಆನ್‍ಲೈನ್ ಮೂಲಕ ಮುಂದುವರೆಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಈ ಕುರಿತು ಆದೇಶಿಸಿ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ, ಪಾಲಕರಿಗೆ ಮುತ್ತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಕ್ರಮಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಹಾಗೂ ಹುಬ್ಬಳ್ಳಿ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.