ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆ ನಗರದ ನೃಪತುಂಗ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಶನಿವಾರ ರಾತ್ರಿ ಹುಬ್ಬಳ್ಳಿಯ ರಾಜನಗರದಲ್ಲಿರುವ ಸೆಂಟ್ರಲ್ ಸ್ಕೂಲ್ ಹತ್ತಿರ ಚಿರತೆ ಓಡಾಡುತ್ತಿರುವುದು ಕಂಡುಬಂದಿದೆ. ಸ್ಥಳೀಯರು ಓಡಾಡುತ್ತಿದ್ದ ವೇಳೆ ಚಿರತೆ ಕಾಣಿಸಿಕೊಂಡಿದ್ದು, ಮೊಬೈಲ್ ಕ್ಯಾಮರಾದಲ್ಲಿ ಚಿರತೆಯ ಚಲನವಲನ ಸೆರೆಹಿಡಿದಿದ್ದಾರೆ.
ಕಳೆದ ಮೂರು ದಿನಗಳಿಂದ ಚಿರತೆ ಓಡಾಟದ ಸುದ್ದಿಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದು, ಶೀಘ್ರ ಅರಣ್ಯ ಇಲಾಖೆ ಕ್ರಮ ಕೈಗೊಂಡು ಚಿರತೆಯನ್ನ ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ರಾತ್ರಿ ತಪಾಸಣೆಗೆ ನಿಂತಿದ್ದ ಪೊಲೀಸರ ಮೇಲೆಯೆ ಬೈಕ್ ಹತ್ತಿಸಿದ ಪುಂಡರು : ಸಿಸಿಟಿವಿ ದೃಶ್ಯ ಸೆರೆ