ಹುಬ್ಬಳ್ಳಿ: ಇಲ್ಲಿನ ಕಲಘಟಗಿ ತಾಲೂಕಿನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕಗೊಂಡಿದ್ದಾರೆ.
ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿನ ಸಾಕು ನಾಯಿ, ಹಸು ಹಾಗೂ ಮೇಕೆ ಮರಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಹೆಚ್ಚಿದ ತಾಪ... ಹೊರಬರುತ್ತಿರುವ ಹಾವುಗಳು... ಜನರಿಂದ ಬಿಬಿಎಂಪಿಗೆ ನಿತ್ಯ ಕರೆ
ಚಿರತೆ ದಾಳಿ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ಆದ್ರೆ ಇದುವರೆಗೂ ಸಿಬ್ಬಂದಿ ತಪಾಸಣೆ ಮಾಡಿದ್ದು ಬಿಟ್ಟರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.