ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆ ಜಿಲ್ಲಾಡಳಿತ ನಿರ್ದೇಶನದ ಮೇರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿದೆ. ನಿನ್ನೆಯಿಂದ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡ ತೆರವು ಕಾರ್ಯ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.
ಡಿಎಫ್ಒ ಯಶಪಾಲ ಕ್ಷೀರಸಾಗರ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ನಗರದ ನೃಪತುಂಗ ಬೆಟ್ಟ, ರಾಜನಗರ, ಶಿರಡಿನಗರ ಮತ್ತಿತರ ಕಡೆ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಜೊತೆಗೆ ಚಿರತೆ ಸೆರೆಗಾಗಿ ಬೋನ್ ಇಟ್ಟು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದೀಗ ಅರಣ್ಯ ಇಲಾಖೆ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡ ತೆರವು ಮಾಡುತ್ತಿದ್ದು, ಈ ಕುರಿತು ವಿಧಾನಸಭೆ ಕಲಾಪದಲ್ಲೂ ಪ್ರಸ್ತಾಪವಾಗಿದೆ.
ಇದನ್ನೂ ಓದಿ: ಶಾಲೆ ಬಳಿ ಚಿರತೆ ಪ್ರತ್ಯಕ್ಷ ಹಿನ್ನೆಲೆ ಅರಣ್ಯ ಇಲಾಖೆ ಸ್ಥಳದಲ್ಲೇ ಠಿಕಾಣಿ : ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ