ETV Bharat / state

ಜಮೀನು ಜಗಳ ಹಿನ್ನೆಲೆ ಮಹಿಳೆ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

ಜಮೀನು ವಿಷಯಕ್ಕೆ ನಡೆದ ಕೊಲೆ ಪ್ರಕರಣ ಸಾಬೀತಾದ ಹಿನ್ನೆಲೆ ಅಪರಾಧಿಗೆ 5ನೇ ಜೆ.ಎಂ.ಎಫ್.ಸಿ ಹೆಚ್ಚುವರಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

life-sentence-for-woman-murder-accused
ಅಪರಾಧಿಗೆ ಜೀವಾವಧಿ ಶಿಕ್ಷೆ
author img

By

Published : Apr 1, 2021, 2:40 AM IST

ಹುಬ್ಬಳ್ಳಿ: ಜಮೀನು ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿದ ಅಪರಾಧಿಗೆ 5ನೇ ಜೆ.ಎಂ.ಎಫ್.ಸಿ ಹೆಚ್ಚುವರಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ.

ಖಾದರಸಾಬ ಮನಿಯೂರ ಎಂಬುವನೇ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದಾನೆ‌. 2017ರ ಸೆಪ್ಟೆಂಬರ್ 25ರಂದು ಆರೋಪಿಯು ಜಮೀನಿನ ವಿಷಯಕ್ಕೆ ಸಂಬಂಧಿಸಿದಂತೆ ನೀಲವ್ವ ತಿಪ್ಪಣ್ಣವರ ಎಂಬ ಮಹಿಳೆಯನ್ನು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದ. ಈ ಅಪರಾಧ ಸಾಬೀತಾದ ಹಿನ್ನೆಲೆ ಖಾದರಸಾಬ ಮನಿಯೂರಗೆ 5ನೇ ಜೆ.ಎಂ.ಎಫ್.ಸಿ ಹೆಚ್ಚುವರಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಕಲಂ 302ರ ಅಡಿಯಲ್ಲಿ ಅಪರಾಧ ಸಾಬೀತಾಗಿದ್ದು, ನ್ಯಾಯಾಧೀಶರಾದ ಕೆ.ಎನ್‌.ಗಂಗಾಧರ ಶಿಕ್ಷೆಯ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕರಾದ ಸುಮಿತ್ರಾ ಅಂಚಟಗೇರಿ ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ರೌಡಿಶೀಟರ್ ಕೊಲೆಗೈದ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.