ETV Bharat / state

ಧಾರವಾಡ: ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬಿಇಒ ಮನೆ ಮೇಲೆ ಲೋಕಾಯುಕ್ತ ದಾಳಿ - ಈಟಿವಿ ಭಾರತ ಕನ್ನಡ

ನಿವೃತ್ತಿ ಹಣ ಮಂಜೂರಿಗೆ ದಾಖಲೆ ರವಾನಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಇಒ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಿಇಒ ಮನೆ ಮೇಲೆ ಲೋಕಾಯುಕ್ತ ದಾಳಿ
ಬಿಇಒ ಮನೆ ಮೇಲೆ ಲೋಕಾಯುಕ್ತ ದಾಳಿ
author img

By ETV Bharat Karnataka Team

Published : Dec 2, 2023, 8:02 PM IST

ಧಾರವಾಡ: ಜಿಲ್ಲೆಯ ಕುಂದಗೋಳ ಬಿಇಒ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕುಂದಗೋಳ ಬಿಇಒ ಡಾ.ವಿದ್ಯಾ ಕುಂದರಗಿ ಅವರ ಧಾರವಾಡ ಹೊಯ್ಸಳ ನಗರ ಬಡಾವಣೆಯಲ್ಲಿನ ನಿವಾಸದ ಮೇಲೆ ದಾಳಿ ನಡೆದಿದೆ.

ಎಸ್ಪಿ ಸತೀಶ ಚಿಟಗುಬ್ಬಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಧಾರವಾಡ ಜಿಲ್ಲೆ ಕುಂದಗೋಳ ವಲಯ ಬಿಇಒ ಆಗಿ ಡಾ. ವಿದ್ಯಾ ಕುಂದರಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಿಇಒ ಕಚೇರಿಯಲ್ಲಿ ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ ಧಾರವಾಡ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ನಿವೃತ್ತಿ ಹಣ ಮಂಜೂರಿಗೆ ದಾಖಲೆ ರವಾನಿಸಲು ಮಂಜುನಾಥ ಕುರುವಿನಶೆಟ್ಟಿ ಎಂಬುವವಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಜುನಾಥ, ಹರ್ಲಾಪುರ ಗ್ರಾಮದ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದಾರೆ. 8000 ರೂ. ಲಂಚ ಪಡೆಯುವಾಗ ಬಿಇಒ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆ ಧಾರವಾಡ ನಿವಾಸಕ್ಕೆ ದಾಳಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ. ಮನೆಯಲ್ಲಿಯೂ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.

ಹಿಂದಿನ ಪ್ರಕಣಗಳು, ಮರಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ: ಮರಣ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಿದ ವ್ಯಕ್ತಿಯಿಂದ ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದ ವೇಳೆ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೆಲದಿನಗಳ ಹಿಂದೆ ನಡೆದಿತ್ತು.

ಜಮೀನು ಮಾರಾಟ ಮಾಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಚಾರಿಸಿದಾಗ, ಅಜ್ಜನ ಮರಣ ಪ್ರಮಾಣ ಪತ್ರ ಮತ್ತು ಸಂತತಿ ನಕ್ಷೆ ಮಾಡಿಕೊಂಡು ಬನ್ನಿ ಎಂದು ತಿಳಿಸಿದ್ದರು. ಅದರಂತೆ ದೂರುದಾರರು ಸೆಪ್ಟೆಂಬರ್ ತಿಂಗಳಿನಲ್ಲಿ ಚೇಳ್ಯಾರು ಗ್ರಾಮಕರಣಿಕರ ಕಚೇರಿಗೆ ಹೋಗಿ ತನ್ನ ಅಜ್ಜನ ಮರಣದ ದೃಢಪತ್ರಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಅರ್ಜಿ ನೀಡಲು 15 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಆಡಳಿತಾಧಿಕಾರಿ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು.

ಮನೆಯ ಜಿಪಿಎಸ್​ ಮಾಡಿಸಿಕೊಡಲು ಲಂಚಕ್ಕೆ ಬೇಡಿಕೆ: ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್​ ಸದಸ್ಯನನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಬಂಧಿಸಿದ್ದ ಘಟನೆ ಹಾವೆರಿಯಲ್ಲಿ ಇತ್ತೀಚೆಗೆ ನಡೆದಿತ್ತು. ದೂರುದಾರರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಮನೆ ಮಂಜೂರಾಗಿತ್ತು. ಈ ಮನೆಗೆ ಜಿಪಿಎಸ್ ಮಾಡಿಸಲು ಗ್ರಾಮ ಪಂಚಾಯತ್​ ಸದಸ್ಯ ​40 ಸಾವಿರ ರೂಪಾಯಿ ಲಂಚ ಬೇಡಿಕೆಯಿಟ್ಟದ್ದ‌ರು. 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರ ಪೊಲೀಸರ ಬಲೆಗೆ ಬಿದ್ದಿದ್ದರು.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಭೂ ದಾಖಲೆಗಳ ಸಹಾಯಕ‌ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.