ಧಾರವಾಡ: ಸಾರಿಗೆ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ಹೊರವಲಯದ ರಾಷ್ಟ್ರಿಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.
ಬೆಳಗಾವಿ ಕಡೆಯಿಂದ ಹುಬ್ಬಳ್ಳಿಗೆ ಸಾರಿಗೆ ಬಸ್ ತೆರಳುತ್ತಿತ್ತು. ಈ ವೇಳೆ ಲಾರಿ ಡ್ರೈವರ್ ಬಸ್ ಓವರ್ ಟೇಕ್ ಮಾಡಲು ಹೋಗಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಸರು ತಿಳಿದು ಬಂದಿಲ್ಲ. ಅಲ್ಲದೆ, ಬಸ್ನಲ್ಲಿದ್ದವರಿಗೆ ಕೂಡಾ ಚಿಕ್ಕ ಪುಟ್ಟ ಗಾಯಗಳಾಗಿವೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.