ಹುಬ್ಬಳ್ಳಿ: ಅಗತ್ಯ ವಸ್ತುಗಳ ಸಾಗಾಣಿಕೆ ಮಾಡುವ ಲಾರಿ ಚಾಲಕರ ಮೇಲೆ ಪೊಲೀಸರು ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅಗತ್ಯ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ಕೈದು ಜನ ಚಾಲಕರಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಪೊಲೀಸರ ನಡೆಗೆ ಲಾರಿ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಗತ್ಯ ಪಾಸ್ ತೋರಿಸಿ ಕೆಲಸಕ್ಕೆ ತೆರಳುತ್ತಿದ್ದರೂ ಲಾಠಿಯಿಂದ ಪೊಲೀಸರು ಹಲ್ಲೆ ನಡೆಸುವ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಲಾರಿ ಚಾಲಕರು ಒತ್ತಾಯಿಸಿದ್ದಾರೆ.