ಧಾರವಾಡ: ಮಹದಾಯಿ ಮಹಾವೇದಿಕೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಸ್ಥಿಕೆ ವಹಿಸಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಡಿ.24 ರಂದು ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹದಾಯಿಗಾಗಿ ಮಹಾ ವೇದಿಕೆ ರಾಜ್ಯ ಸಂಚಾಲಕ ಶಂಕರ್ ಅಂಬಲಿ ತಿಳಿಸಿದರು.
ಇಂದು ನಗರದ ಸರ್ಕಿಟ್ ಹೌಸ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲಾಭವನದಿಂದ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಈ ರ‍್ಯಾಲಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದೆ. ಈ ರ‍್ಯಾಲಿಯಲ್ಲಿ ಬುದ್ಧಿಜೀವಿಗಳು, ರೈತರು, ಕಾರ್ಮಿಕರು, ವ್ಯಾಪಾರಸ್ಥರು, ದಲಿತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳೂ ಸಹ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹದಾಯಿ ಯೋಜನೆ ಜಾರಿಗೊಳಿಸಬೇಕು. ಮಲಪ್ರಭಾ ವ್ಯಾಪ್ತಿಯ ಒಂಬತ್ತು ತಾಲೂಕುಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಬೇಕು ಎಂದು ಆಗ್ರಹಿಸಲಾಗಿತ್ತು ಎಂದರು. ಈ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಹದಾಯಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.