ಹುಬ್ಬಳ್ಳಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹುಬ್ಬಳ್ಳಿ ಶಾಖೆ ನೋಡಿಕೊಳ್ಳುತ್ತಿದ್ದ ಹಾಗೂ ಮಾಜಿ ಮಹಾಪೌರರಾಗಿದ್ದ ಮೋಹನ ಏಕಬೋಟೆಯವರ ಪುತ್ರ ಶಶಾಂಕ ಏಕಬೋಟೆ ಕೋವಿಡ್ಗೆ ಬಲಿಯಾಗಿದ್ದಾರೆ.
ಶಶಾಂಕ್ ಮೋಹನ ಏಕಬೋಟೆ (37) ಮಣಿಪಾಲ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸರಳ, ಸಜ್ಜನಿಕೆ ವ್ಯಕ್ತಿಯಾಗಿದ್ದ ಶಶಾಂಕ್ ಅವರು ಸಾಕಷ್ಟು ಸಾಮಾಜಿಕ ಕಾರ್ಯದ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದರು.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಶ್ವಾಸಕೋಶದ ಸಮಸ್ಯೆಯಿಂದ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಓದಿ: ನಾಳೆ ಸಿಎಂ ಸುದ್ದಿಗೋಷ್ಠಿ: ವಿಶೇಷ ಪ್ಯಾಕೇಜ್, ಲಾಕ್‌ಡೌನ್ ವಿಸ್ತರಣೆ ಘೋಷಣೆ ಸಾಧ್ಯತೆ