ಹುಬ್ಬಳ್ಳಿ(ಧಾರವಾಡ): ವಿದ್ಯುತ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸುವಲ್ಲಿ ಸ್ಥಳೀಯರು, ಹೆಸ್ಕಾಂ ಗ್ರಾಮೀಣ ಉಪವಿಭಾಗದ ಕಾರ್ಯಾನಿರ್ವಾಹಕ ಅಭಿಯಂತರ ಕಿರಣಕುಮಾರ ಯಶಸ್ವಿಯಾಗಿದ್ದಾರೆ.
ಬಿಡ್ನಾಳ ಬಳಿ ರಾಘವೇಂದ್ರ ಬಳ್ಳಾರಿ ಎನ್ನುವ ವ್ಯಕ್ತಿ 11 ಕೆವಿ ಹೈಟೆನ್ಷನ್ ಟವರ್ ಮೇಲೆ ಏರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ರಾಘವೇಂದ್ರ ಅವರನ್ನು ಕೆಳಗಿಳಿಸಲು ಪ್ರಯತ್ನಿಸಿದ್ದಾರೆ. ಆಗ ಸ್ಥಳೀಯರೊಬ್ಬರು ಹೆಸ್ಕಾಂ ಅಧಿಕಾರಿ ಕಿರಣಕುಮಾರ ಅವರಿಗೆ ಕರೆ ಮಾಡಿದ್ದಾರೆ. ಕೂಡಲೇ ಕಾರ್ಯ ಪ್ರವೃತ್ತರಾದ ಅಧಿಕಾರಿ ವಿದ್ಯುತ್ ಸಂಪರ್ಕ ಬಂದ್ ಮಾಡಿಸಿದರು.
ಸಂಪರ್ಕ ಕಡಿತವಾಗಿದ್ದು, ಅದೃಷ್ಟವಶಾತ್ ರಾಘವೇಂದ್ರ ಅವರಿಗೆ ಏನೂ ಆಗಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಹೆಸ್ಕಾಂ ಅಧಿಕಾರಿಗಳು, ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಹೆಸ್ಕಾಂ ಅಧಿಕಾರಿಗಳ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ; ಅಪಘಾತದಲ್ಲಿ ಆಪ್ತ ಸ್ನೇಹಿತರ ದುರ್ಮರಣ