ಹುಬ್ಬಳ್ಳಿ: ಚೇತನಾ ಕಾಲೇಜು ಬಳಿಯ ಬಸ್ ನಿಲ್ದಾಣದಲ್ಲೇ ಮಧ್ಯಮ ವಯಸ್ಸಿನ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿದ್ದು, ಮೃತ ವ್ಯಕ್ತಿಯ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಸುಮಾರು 40 ವಯಸ್ಸಿನ ವ್ಯಕ್ತಿ ಬಸ್ ನಿಲ್ದಾಣದಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಬೆಳಗ್ಗೆ ಈ ರಸ್ತೆಯಲ್ಲಿ ವಾಯುವಿಹಾರ ಮಾಡುವವರು ಈತನ ಶವ ನೋಡಿ ಆಘಾತಕ್ಕೊಳಗಾಗಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ಮೂಡಿದ್ದು, ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.