ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಕಾಲಿಕವಾಗಿ ಸುರಿದ ಧಾರಾಕಾರ ಮಳೆಯು ಒಂದಿಲ್ಲೊಂದು ರೀತಿಯಲ್ಲಿ ಅವಾಂತರ ಸೃಷ್ಟಿಸಿದ್ದು, ಮಳೆಗೆ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ. ಈ ಘಟನೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಮನೆಯ ಹತ್ತಿರದ ದೇಸಾಯಿ ಕ್ರಾಸ್ ನಲ್ಲಿ ನಡೆದಿದೆ.
ಬಿರುಗಾಳಿ ಸಹಿತ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಚಲಿಸುತ್ತಿದ್ದ ಆಟೋ ಮೇಲೆ ಮರವೊಂದು ಉರುಳಿ ಬಿದ್ದಿರುವ ಪರಿಣಾಮ ಆಟೋದಲ್ಲಿದ್ದ ಓರ್ವ ಪ್ರಯಾಣಿಕ ಸಾವಿಗೀಡಾಗಿದ್ದಾನೆ. ರೂಬಿ ಮೋರಿಸ್ ಮೃತ ವ್ಯಕ್ತಿ. ಇದೇ ವೇಳೆ ಮತ್ತೋರ್ವ ಪ್ರಯಾಣಿಕನಿಗೆ ಗಾಯಗಳಾಗಿವೆ.
ಸ್ಥಳಕ್ಕೆ ತಹಶೀಲ್ದಾರ್ ಶಶಿಧರ್ ಮಾಡ್ಯಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಪಿಎಸ್‌ಐ ಪರೀಕ್ಷಾ ಹಗರಣ.. ಸಿಐಡಿಯಿಂದ ಪ್ರಿಯಾಂಕ್ ಖರ್ಗೆಗೆ ಮತ್ತೊಂದು ನೋಟಿಸ್