ETV Bharat / state

ಹುಬ್ಬಳ್ಳಿ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ನೀರಿನ ಡ್ರಮ್‌ನಲ್ಲಿ ಮುಳುಗಿ ಸಾವು - man died in hubballi

ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ನೀರಿನ ಡ್ರಮ್‌ನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಗೋಕುಲ ರೋಡ್ ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯಲ್ಲಿ ನಡೆದಿದೆ.

ಗೋಕುಲ ರೋಡ್ ಪೊಲೀಸ್ ಠಾಣೆ
ಗೋಕುಲ ರೋಡ್ ಪೊಲೀಸ್ ಠಾಣೆ
author img

By

Published : Nov 26, 2021, 3:01 PM IST

ಹುಬ್ಬಳ್ಳಿ: ಕಂಠಪೂರ್ತಿ ಮದ್ಯ ಸೇವಿಸಿದ್ದ ವ್ಯಕ್ತಿ ನೀರಿನ ಡ್ರಮ್‌ನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ ಕೊತ್ತಲ್ (49) ಮೃತಪಟ್ಟ ವ್ಯಕ್ತಿ. ಈತ ವಿಪರೀತ ಮದ್ಯ ಸೇವಿಸುತ್ತಿದ್ದನಂತೆ. ನವೆಂಬರ್‌ 22ರಿಂದ 24ರ ನಡುವಿನ ಅವಧಿಯಲ್ಲಿ ಮದ್ಯದ ಅಮಲಿನಲ್ಲಿ ಬಚ್ಚಲು ಕಟ್ಟೆ ಬಳಿ ಇಟ್ಟಿದ್ದ ನೀರಿನ ಡ್ರಮ್‌ಗೆ ಆಯತಪ್ಪಿ ಬಿದ್ದಿದ್ದಾನೆ ಎಂದು ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರಸುದಾರರಿಲ್ಲ: ವೆಂಕಟೇಶ 5.6 ಅಡಿ ಎತ್ತರ, ಸಾದಗಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದಾನೆ. ಈತನ ವಾರಸುದಾರರು ಯಾರಾದರೂ ಇದ್ದಲ್ಲಿ ದೂರವಾಣಿ ಸಂಖ್ಯೆ 0836-2233525 ಅಥವಾ ಮೊಬೈಲ್‌ ಸಂಖ್ಯೆ 9480802047ಗೆ ಸಂಪರ್ಕಿಸುವಂತೆ ಪೊಲೀಸ್​ ಇಲಾಖೆ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.