ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿ ವ್ಕಕ್ತಿಯೊಬ್ಬ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಇಲ್ಲಿನ ಹಳೇ ಬಸ್ ನಿಲ್ದಾಣದ ಬಳಿ ನಡೆದಿದೆ.
ಈತ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದು ಚಕ್ರ ಮೈಮೇಲೆ ಹತ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಮೃತಪಟ್ಟ ವ್ಯಕ್ತಿ 35 ವರ್ಷದವನಾಗಿದ್ದು ಇನ್ನೂ ಗುರುತು ಪತ್ತೆಯಾಗಿಲ್ಲ.
ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲಿಸಿ ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.