ಧಾರವಾಡ: ನಗರದಲ್ಲಿ ಹಾಡುಹಗಲೇ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ತಾಲೂಕಿನ ನುಗ್ಗಿಕೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹನುಮಂತಗೌಡ ಪಾಟೀಲ (28) ಕೊಲೆಯಾದ ವ್ಯಕ್ತಿಯಾಗಿದ್ದು, ಮನೆಯಲ್ಲಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಶ್ವಾನದಳದೊಂದಿಗೆ ಬಂದ ಪೊಲೀಸ್ ಸಿಬ್ಬಂದಿ ಆರೋಪಿ ಪತ್ತೆಗಾಗಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೃತನ ಸಹೋದರ, ತಾಯಿಯ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.