ಧಾರವಾಡ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ ಎರಡನೇ ಅಧಿಕ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ಹಾಗೂ ಒಟ್ಟು 55 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಸೈಯದ್ ಸಾಜೀದ್ ಹುಸೇನ್ ಸುಲೇದಾರ್ ಎಂಬಾತನೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಪ್ಪಿತಸ್ಥನಾಗಿದ್ದು, ಈತನ ಮೇಲಿನ ಸಾಕ್ಷಿಗಳು ಸಾಬೀತಾದ ಹಿನ್ನೆಲೆ ನ್ಯಾಯಾಲಯ ಈ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಗಿರಿಜಾ ತಮ್ಮಿನಾಳ ಅವರು ಸಂತ್ರಸ್ತೆ ಪರ ವಾದ ಮಂಡಿಸಿದ್ದರು.