ETV Bharat / state

Dharwad Rain: ಧಾರವಾಡದಲ್ಲಿ ನಿರಂತರ ಮಳೆ; 198 ಮನೆಗಳಿಗೆ ಹಾನಿ - houses damaged

Rain Effects in Dharwad: ಧಾರವಾಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.

heavy rain in Dharwad
ಧಾರವಾಡದಲ್ಲಿ ನಿರಂತರ ಮಳೆ
author img

By

Published : Jul 28, 2023, 10:34 AM IST

ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸದ್ಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಲವೆಡೆ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ, ಸಾವು-ನೋವು ಸಂಭವಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜುಲೈ 26ರ ಬೆಳಿಗ್ಗೆ 8 ಗಂಟೆಯಿಂದ 27ರ ಬೆಳಿಗ್ಗೆ 8 ಗಂಟೆಯವರೆಗೆ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ.

8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ 87 ಮನೆಗಳು, ಅಳ್ನಾವರ ತಾಲೂಕಿನಲ್ಲಿ 4, ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 11, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ 7, ಕಲಘಟಗಿ ತಾಲೂಕಿನಲ್ಲಿ 45, ಕುಂದಗೋಳ ತಾಲೂಕಿನಲ್ಲಿ 26, ನವಲಗುಂದ ತಾಲೂಕಿನಲ್ಲಿ 10 ಮತ್ತು ಅಣ್ಣಿಗೇರಿ ತಾಲೂಕಿನಲ್ಲಿ 8 ಮನೆಗಳೂ ಸೇರಿದಂತೆ ಜಿಲ್ಲೆಯ 8 ತಾಲೂಕುಗಳಲ್ಲಿ ಸುಮಾರು 198 ಮನೆಗಳು ತೊಂದರೆಗೀಡಾಗಿವೆ.

ಪರಿಹಾರ ವಿತರಣೆಗೆ ಕ್ರಮ: ಈ ಎಲ್ಲ ಪ್ರಕರಣಗಳ ಕುರಿತು ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ತಹಶೀಲ್ದಾರ್‌ಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ತನಿಖಾ ತಂಡದಿಂದ ಪರಿಶೀಲನೆ ಕಾರ್ಯ ನಡೆದು, ಅರ್ಹ ಫಲಾನುಭವಿಗಳಿಗೆ ಪರಿಹಾರ ವಿತರಿಸುವಲ್ಲಿ ಸರ್ಕಾರದ ನಿಯಮಾವಳಿಗಳಂತೆ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಏ.1ರಿಂದ ಜು.27ರವರೆಗೆ 692 ಮನೆಗಳಿಗೆ ಹಾನಿ: ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಹಾಗೂ ನಗರಗಳಲ್ಲಿ ಮಳೆಯಿಂದಾಗಿ ಏಪ್ರಿಲ್ 01ರಿಂದ ಜುಲೈ 27ರ ವರೆಗೆ 677 ಮನೆಗಳಿಗೆ ಭಾಗಶಃ ಹಾಗೂ 15 ಮನೆಗಳಿಗೆ ತೀವ್ರತರ ಹಾನಿಯಾಗಿದೆ. ಇಲ್ಲಿಯವರೆಗೆ ಸುಮಾರು 692 ಮನೆಗಳಿಗೆ ಹಾನಿಯಾಗಿದ್ದು, ಈ ಕುರಿತು ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳು ವರದಿ ಸಲ್ಲಿಸಿದ ನಂತರ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Uttara Kannada Rain: ಜೋಯಿಡಾದಲ್ಲಿ ವ್ಯಕ್ತಿಯ ಶವ ಸಾಗಾಟಕ್ಕೆ ಪರದಾಟ; ಕಂಬಳಿ ಜೋಲಿಯಲ್ಲಿ ರೋಗಿಯ ಸಂಕಟ

ಹೆಗಲ ಮೇಲೆ ಶವ ಹೊತ್ತು ಮನೆಗೆ ರವಾನೆ: ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಇಲ್ಲಿನ ಅಪ್ಪರ ಕಾನೇರಿ ಜಲಾಶಯದ ಹಿನ್ನೀರಿನಲ್ಲಿ ಸೇತುವೆ ಮುಳುಗಿ, ಜನಸಾಮಾನ್ಯರು ಪರದಾಡುತ್ತಿದ್ದಾರೆ. ರೋಗಿಯೋರ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಬಳಿಕ ಅವರನ್ನು ಮನೆ ತಲುಪಿಸಲು ಜನರು ಹರಸಾಹಸಪಡಬೇಕಾಯಿತು. ದೋಣಿ ಮೂಲಕ ಮೃತದೇಹ ತಂದು, ಬಳಿಕ ಹೆಗಲ ಮೇಲೆ ಶವ ಹೊತ್ತು ಮನೆ ತಲುಪಿಸಿದ್ದಾರೆ.

ಇದನ್ನೂ ಓದಿ: Karnataka Rains: ರಾಜ್ಯಾದ್ಯಂತ ಮುಂಗಾರು ಮಳೆ ಹನಿಗಳ ಲೀಲೆ! PHOTOಗಳಲ್ಲಿ ನೋಡಿ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.