ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ರವಿ ಯಲಿಗಾರ ಹಾಗೂ ಸುನೀಲ ನಂದಿಹಳ್ಳಿ ಬಂಧಿತ ಆರೋಪಿಗಳು. ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಶೋಕ ನಗರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1 ಕೆಜಿ 650 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.