ಧಾರವಾಡ: ನವ ವಿವಾಹಿತೆಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತಳು ರಂಜಿತಾ ಹಂಚಿನಮನಿ (19) ಎಂದು ಗುರುತಿಸಲಾಗಿದೆ. ಮುಮ್ಮಿಗಟ್ಟಿ ಗ್ರಾಮದ ಮಂಜುನಾಥ ಹಂಚಿನಮನಿ ಎಂಬಾತನೊಂದಿಗೆ ರಂಜಿತಾ ಕಳೆದ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಗಂಡನ ಮನೆಯವರು ರಂಜಿತಾಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕಿರುಕುಳದಿಂದ ಬೇಸತ್ತ ರಂಜಿತಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.