ಧಾರವಾಡ: ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ನೀಡಿ ಕೊರೊನಾ ಕುರಿತಾಗಿ ವೈದ್ಯರೊಬ್ಬರು ಜಾಗೃತಿ ಮೂಡಿಸುವ ಕೆಲಸ ಮಾಡಿತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಮಯೂರೇಶ ಅವರು ತಮ್ಮ ಸ್ನೇಹಿತರ ಜೊತೆ ಸೇರಿ ಜನರಿಗೆ ಮಾಸ್ಕ್ ವಿತರಣೆ ಮಾಡುವ ಮೂಲಕ ಮಾದರಿ ಕೆಲಸಕ್ಕೆ ಮುಂದಾಗಿದ್ದಾರೆ.
ಧಾರವಾಡದ ಮಾರುಕಟ್ಟೆ, ಬಸ್ ನಿಲ್ದಾಣ, ಶಿಕ್ಷಣ ಸಂಸ್ಥೆ, ಸರ್ಕಾರಿ ಕಚೇರಿಗಳಿಗೆ ತೆರಳಿ ಮಾಸ್ಕ್ ವಿತರಣೆ ಮಾಡಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಸುಮಾರು ಹತ್ತು ಸಾವಿರ ಮಾಸ್ಕ್ಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಉಚಿತವಾಗಿ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಡಾ. ಮಯೂರೇಶ್, ಕೊರೊನಾವನ್ನು ಭಾರತದಿಂದ ಮುಕ್ತಗೊಳಿಸಬೇಕು. ಆದ್ದರಿಂದ ಕೆಲವರಿಗೆ ಮಾಸ್ಕ್ ಇರುವುದಿಲ್ಲ. ಅನಿವಾರ್ಯ ಕಾರಣಕ್ಕಾಗಿ ಕೆಲವರು ಖರೀದಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಾವು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಸ್ಕ್ ವಿತರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಈ ಎಲ್ಲಾ ಕಾರ್ಯಗಳಲ್ಲೂ ಅವರ ಸ್ನೇಹಿತರು ಸಹಕರಿಸಿದ್ದಾರೆ.
ಕೊರೊನಾ ಸಂದರ್ಭದಲ್ಲಿ ಒಂದು ರಜೆ ತೆಗೆದುಕೊಳ್ಳದೆ ಡಾ. ಮಯೂರೇಶ್ ಜನರ ಸೇವೆ ಮಾಡಿದ್ದಾರೆ. ಇದೀಗ ತಮ್ಮ ವೇತನದಿಂದ ಸುಮಾರು ಒಂದು ಲಕ್ಷ ಐವತ್ತು ಸಾವಿರ ರೂಪಾಯಿ ಖರ್ಚು ಮಾಡಿ ಉಚಿತ ಮಾಸ್ಕ್ ನೀಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ.