ಹುಬ್ಬಳ್ಳಿ: ನಗರದ ಕರಾಡಿ ಓಣಿಯ 63 ವರ್ಷದ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಪಿ-363 ವ್ಯಕ್ತಿಯ ಸಂಪರ್ಕದಲ್ಲಿ ಇದಿದ್ದ ಸಂಬಂಧಿಕರು ಹಾಗೂ ಆಪ್ತರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ.
ಸೋಂಕಿತ ಸಂಪರ್ಕದಲ್ಲಿ ಇದ್ದವರನ್ನು ಮುಂಜಾಗ್ರತಾ ಕ್ರಮವಾಗಿ ಧಾರವಾಡ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ಹಾಗೂ ಕ್ವಾರಂಟೈನ್ಗೆ ಕರೆದುಕೊಂಡು ಹೋಗಿದೆ. ಸೋಂಕಿತ ವ್ಯಕ್ತಿಯು ಕಮರಿಪೇಟೆಯ ಕರಡಿ ಓಣಿಯ ನಿವಾಸಿ ಆಗಿದ್ದು, ಸ್ಮಶಾನದಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.