ETV Bharat / state

ಸಚಿವ ಡಿ.ಸುಧಾಕರ್‌ಗೆ ರಿಲೀಫ್: ದೌರ್ಜನ್ಯ ಪ್ರಕರಣಕ್ಕೆ ಹೈಕೋರ್ಟ್‌ ತಡೆ - ಪ್ರಕರಣಕ್ಕೆ ನ್ಯಾಯಾಧೀಶರು ತಡೆಯಾಜ್ಞೆ

ಸಚಿವ ಡಿ.ಸುಧಾಕರ್ ಅವರಿಗೆ ರಿಲೀಫ್ ಸಿಕ್ಕಿದೆ. ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.

Minister D Sudhakar Big relief  Dharwad High Court  High Court granted stay in atrocity case  ಸಚಿವ ಡಿ ಸುಧಾಕರಗೆ ಬಿಗ್ ರಿಲೀಫ್  ಅಟ್ರಾಸಿಟಿ ಪ್ರಕರಣಕ್ಕೆ ತಡೆ  ತಡೆಯಾಜ್ಣೆ ನೀಡಿದ ಧಾರವಾಡ ಹೈಕೋರ್ಟ್  ಸಚಿವ ಸುಧಾಕರ ಮೇಲೆ ಯಲಹಂಕ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ  ಪ್ರಕರಣಕ್ಕೆ ನ್ಯಾಯಾಧೀಶರು ತಡೆಯಾಜ್ಞೆ  ಧಾರವಾಡ ಹೈಕೋರ್ಟ್ ತಡೆಯಾಜ್ಞೆ
ಅಟ್ರಾಸಿಟಿ ಪ್ರಕರಣಕ್ಕೆ ತಡೆಯಾಜ್ಣೆ ನೀಡಿದ ಧಾರವಾಡ ಹೈಕೋರ್ಟ್
author img

By ETV Bharat Karnataka Team

Published : Sep 15, 2023, 2:58 PM IST

ಧಾರವಾಡ/ಬೆಂಗಳೂರು: ಯೋಜನೆ ಮತ್ತು ಸಾಂಖಿಕ ಖಾತೆ ಸಚಿವ ಡಿ.ಸುಧಾಕರ್ ವಿರುದ್ಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ.

ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸೆವನ್ ಹಿಲ್ಸ್ ಡೆವಲ್ಪರ್ಸ್ ಆ್ಯಂಡ್ ಟ್ರೇಡರ್ಸ್‌ನ ನಿರ್ದೇಶಕರೂ ಆಗಿರುವ ಡಿ.ಸುದಾಕರ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಆದೇಶ ನೀಡಿತು. ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ತುರ್ತು ನೊಟೀಸ್ ಜಾರಿ ಮಾಡಿ ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: "ಡಿ.ಸುಧಾಕರ್, ಜಿ.ಶ್ರೀನಿವಾಸ್ ಮತ್ತು ಭಾಗ್ಯಮ್ಮ ಎಂಬವರು ನಮ್ಮ ಕುಟುಂಬದವರಿಗೆ ಮೋಸ ಮಾಡಿ ಜಮೀನಿನ ಕ್ರಯಪತ್ರ ಮಾಡಿಕೊಂಡಿದ್ದಾರೆ. ಈ ಕುರಿತು ನಗರದ ಸಿವಿಲ್ ನ್ಯಾಯಾಲಯ ಮತ್ತು ಹೈಕೋರ್ಟ್‌ನಲ್ಲಿ ಪ್ರಕರಣ ವಿಚಾರಣಾ ಹಂತದಲ್ಲಿದೆ. ಹೀಗಿದ್ದರೂ, ಡಿ.ಸುಧಾಕರ್ ಸೇರಿದಂತೆ ಮತ್ತಿತರರು ಬಂದು ತಾವು ನೆಲೆಸಿರುವ ಮನೆಗಳನ್ನು ತೆರವುಗೊಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿ ಪ್ರಶ್ನಿಸಿದಾಗ ಸುಮಾರು 35ಕ್ಕೂ ಹೆಚ್ಚು ಮಂದಿ ತಮ್ಮ ವಿರುದ್ಧ ದೌರ್ಜನ್ಯ ನಡೆಸಿದರು. ಮಗಳ ಮೇಲೆ ಹಲ್ಲೆ ನಡೆಸಿ ನಮ್ಮ ಜಾತಿ ಉಲ್ಲೇಖಿಸಿ ನಿಂದನೆ ಮಾಡಿದರು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು" ಎಂದು ಯಲಹಂಕ ನಿವಾಸಿ ಸುಬ್ಬಮ್ಮ ಸೆಪ್ಟೆಂಬರ್ 10ರಂದು ಯಲಹಂಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪಂಗಡದ (ದೌರ್ಜನ್ಯ ತಡೆ) ಕಾಯಿದೆ, ಐಪಿಸಿಯ ವಿವಿಧ ಸೆಕ್ಷನ್‌ಗಳು ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಿದ್ದರು. ಇದನ್ನು ಪ್ರಶ್ನಿಸಿ ಡಿ.ಸುಧಾಕರ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಸಚಿವ ಡಿ ಸುಧಾಕರ್ ರಾಜೀನಾಮೆ ಒತ್ತಾಯ : ಕಾನೂನು ಕ್ರಮಕ್ಕೆ ಬಿ ವೈ ವಿಜಯೇಂದ್ರ ಆಗ್ರಹ

ಡಿ.ಸುಧಾಕರ್ ಹೇಳಿದ್ದೇನು?: ನಾನು ಯಾವುದೇ ಜಾತಿ ನಿಂದನೆ ಮಾಡಿಲ್ಲ. ಎಲ್ಲ ಜಾತಿಗಳ ಮೇಲೆ ನನಗೆ ಗೌರವವಿದೆ. ಯಾವುದೇ ತಪ್ಪು‌ ಮಾಡಿಲ್ಲ ಎಂದು ಡಿ.ಸುಧಾಕರ್ ಮಂಗಳವಾರ ಸ್ಪಷ್ಟನೆ ನೀಡಿದ್ದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಮ್ಮ ಮೇಲಿನ ಭೂ ಕಬಳಿಕೆ, ಜಾತಿ ನಿಂದನೆ ದೂರು ಸಂಬಂಧ ಕೇಸು ದಾಖಲಾದ ವಿಚಾರವಾಗಿ ಪ್ರತಿಕ್ರಿಯಿಸಿ, ಇದು 15 ವರ್ಷಗಳ ಹಳೆಯ ಪ್ರಕರಣ. 2008ರಲ್ಲಿ ನಡೆದಿದ್ದು, ಈಗ್ಯಾಕೆ ಹೊರತಂದಿದ್ದಾರೆ ಎಂದು ಗೊತ್ತಿಲ್ಲ. ನಾನ್ಯಾವ ಭೂಮಿಯನ್ನೂ ಕಬಳಿಕೆ ಮಾಡಿಲ್ಲ ಎಂದಿದ್ದರು.

ನಾನೂ ಸಹ ಅಲ್ಪಸಂಖ್ಯಾತ ಸಮುದಾಯದಿಂದ ಬಂದವನು. ನನ್ನ ವಿರುದ್ಧ ಸುಳ್ಳು ಎಫ್​ಐಆರ್​ ದಾಖಲಿಸಿದ್ದಾರೆ. ಇದೊಂದು ಷಡ್ಯಂತ್ರ. ನ್ಯಾಯ, ಸತ್ಯ ನನ್ನ ಪರವಾಗಿದೆ. ತಪ್ಪು ಮಾಡಿದ್ರೆ ತಾನೇ ಹೆದರಬೇಕು?. ಪ್ರಕರಣ ಕೋರ್ಟ್‌ನಲ್ಲಿದೆ, ವಿಚಾರಣೆ ನಡೆಯುತ್ತಿದೆ. ನಾನು ತಪ್ಪು ಮಾಡಿದ್ರೆ ಶಿಕ್ಷೆ ಆಗುತ್ತದೆ, ಆದ್ರೆ ನಾನು ತಪ್ಪೇ ಮಾಡಿಲ್ಲ ಎಂದು ಹೇಳಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.