ಧಾರವಾಡ : ನಗರದ ಜುಬ್ಲಿ ವೃತ್ತದಲ್ಲಿರುವ ಕರ್ನಾಟಕ ರಾಜ್ಯ ಆಹಾರ ನಾಗರಿಕ ಸರಬರಾಜು ನಿಗಮದ ಗೋದಾಮಿಗೆ ಸಚಿವ ಕೆ. ಗೋಪಾಲಯ್ಯ ಭೇಟಿ ನೀಡಿ, ಅಕ್ಕಿ ಮತ್ತು ಬೇಳೆಯ ಗುಣಮಟ್ಟ ಪರಿಶೀಲಿಸಿದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಿ.ಎಂ. ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ಜಿಲ್ಲಾಧಿಕಾರಿ ದೀಪಾ ಚೋಳನ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ ಮತ್ತಿತರರು ಸಚಿವರಿಗೆ ಸಾಥ್ ನೀಡಿದರು.