ಹುಬ್ಬಳ್ಳಿ(ಧಾರವಾಡ): ತಾರಿಹಾಳದಲ್ಲಿ 14 ಕೈಗಾರಿಕಾ ವಸಾಹತು ಪ್ರದೇಶಗಳಿವೆ. ಅನಧಿಕೃತವಾಗಿ ನಡೆಸುತ್ತಿರುವ ಕಾರ್ಖಾನೆಗಳ ಬಗ್ಗೆ ಮೂರು ದಿನದಲ್ಲಿ ಸರ್ವೇ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಅಗ್ನಿ ಅವಘಡಕ್ಕೆ ಒಳಗಾದ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗ್ನಿ ಅವಘಡದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ. ಅದರಲ್ಲಿ ಮೂವರು ಮೃತಪಟ್ಟಿದ್ದಾರೆ. ಸರಿಯಾದ ಸಮಯಕ್ಕೆ ಪೊಲೀಸ್ ಇಲಾಖೆಯವರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಭಾಯಿಸಿದ್ದಾರೆ. ಜಿಲ್ಲಾಡಳಿತ ಉತ್ತಮ ಕಾರ್ಯ ನಿರ್ವಹಿಸಿದೆ ಎಂದರು.
ಒಂದು ತಿಂಗಳ ಹಿಂದೆ ಕಾರ್ಖಾನೆ ಆರಂಭವಾಗಿತ್ತು. ಕಾನೂನಿನ ಪ್ರಕಾರ ಕಾರ್ಖಾನೆ ನಡೆಸಲು ಪರವಾನಿಗೆ ಪಡೆಯಬೇಕು. ಆದರೆ ಯಾವ ಇಲಾಖೆಯಲ್ಲಿಯೂ ಕಾರ್ಖಾನೆಯನ್ನು ನೋಂದಣಿ ಮಾಡಿಸಿಲ್ಲ. ಅಧಿಕಾರಿಗಳು ಈಗಾಗಲೇ ಪರಿಶೀಲನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಕಾರ್ಖಾನೆಯಾದರೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಇದನ್ನೂ ಓದಿ: ತಾರಿಹಾಳ ಸ್ಪಾರ್ಕರ್ ಫ್ಯಾಕ್ಟರಿ ಅಗ್ನಿ ಅವಘಡ: ಮತ್ತಿಬ್ಬರು ಸಾವು, ಮೃತರ ಸಂಖ್ಯೆ ಮೂರಕ್ಕೆ ಏರಿಕೆ