ETV Bharat / state

ಪೌರತ್ವ ಕುರಿತ ಗೊಂದಲಗಳಿಗೆ ನಾಳೆ ಅಮಿತ್ ಶಾ ಸ್ಪಷ್ಟನೆ ನೀಡಲಿದ್ದಾರೆ: ಜಗದೀಶ ಶೆಟ್ಟರ್ - ಹುಬ್ಬಳ್ಳಿಯಲ್ಲಿ ಜಗದೀಶ ಶೆಟ್ಟರ್ ಹೇಳಿಕೆ

ದೇಶದಲ್ಲಿರುವ ಯಾವುದೇ ಮುಸ್ಲಿಂ ಸಮುದಾಯದ ಜನರನ್ನು ಹೊರಹಾಕುವ ಉದ್ದೇಶ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿಲ್ಲ. ಆದರೆ ಕಾಂಗ್ರೆಸ್ ಸುಳ್ಳು ಆರೋಪಗಳ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸಚಿವ ಜಗದೀಶ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

Minister Jagadeesh Shettar Statement
ಜಗದೀಶ ಶೆಟ್ಟರ್ ಹೇಳಿಕೆ
author img

By

Published : Jan 17, 2020, 7:45 PM IST

ಹುಬ್ಬಳ್ಳಿ: ದೇಶದಲ್ಲಿರುವ ಯಾವುದೇ ಮುಸ್ಲಿಂ ಸಮುದಾಯದ ಜನರನ್ನು ಹೊರಹಾಕುವ ಉದ್ದೇಶ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಇಲ್ಲ. ಆದರೆ ಕಾಂಗ್ರೆಸ್ ಸುಳ್ಳು ಆರೋಪಗಳ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸಚಿವ ಜಗದೀಶ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಜಗದೀಶ ಶೆಟ್ಟರ್ ಹೇಳಿಕೆ

ನಾಳೆ ನಗರದ ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಯಾವುದೇ ಜನರನ್ನು ಹೊರಹಾಕುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ. ಇದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಕೂಡ ಮುಸ್ಲಿಂ ಸಮುದಾಯದವರು ಅರ್ಥ ಮಾಡಿಕೊಂಡು ಕಾಂಗ್ರೆಸ್ ಹೊರ ಹಾಕಲಿದ್ದಾರೆ ಎಂದರು.

ನಾಳೆ ಅಮಿತ್ ಶಾ ಅವರು ಆಗಮಿಸುತ್ತಿದ್ದು, ಎಲ್ಲ ಗೊಂದಲಗಳಿಗೆ ಬಹಿರಂಗ ಸಭೆಯಲ್ಲಿ ಸ್ಪಷ್ಟನೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ‘ಗೋ ಬ್ಯಾಕ್ ಅಮಿತ್ ಶಾ’ ಪ್ರತಿಭಟನೆ ಕುರಿತು ಮಾತನಾಡಿದ ಶೆಟ್ಟರ್​, ಕಾಂಗ್ರೆಸ್ ಪಕ್ಷ ಅತಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದವರಿಗೆ ಆರೋಪ ಮಾಡಲು ಯಾವುದೇ ವಿಷಯಗಳಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಮೇಲೆ, ಬಿಜೆಪಿ ನಾಯಕರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸಚಿವ ಸಂಪುಟದ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಸಭೆಯ ನಂತರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಯಡಿಯೂರಪ್ಪ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಅದರ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.

Intro:HubliBody:ಸ್ಲಗ್:- ಪೌರತ್ ತಿದ್ದುಪಡಿ ಕಾಯ್ದೆ ಬಗ್ಗೆ ಇರುವ ಗೊಂದಲಗಳಿಗೆ ಬಹಿರಂಗ ಸಭೆಯಲ್ಲಿ ಅಮಿತ್ ಶಾ ಸ್ಪಷ್ಟನೆ ನೀಡಲಿದ್ದಾರೆ..ಶೆಟ್ಟರ್!

ಹುಬ್ಬಳ್ಳಿ: ದೇಶದಲ್ಲಿರುವ ಯಾವುದೇ ಮುಸ್ಲಿಂ ಸಮುದಾಯದ ಜನರನ್ನು ಹೊರಹಾಕುವ ಉದ್ದೇಶ ಪೌರತ್ವ ತಿದ್ದುಪಡಿಯಲ್ಲಿ ಇಲ್ಲ.ಆದರೇ ಕಾಂಗ್ರೆಸ್ ಸುಳ್ಳು ಆರೋಪಗಳ ಮೂಲಕ ಸಮಾಜ ಓಡೆಯುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸಚಿವ ಜಗದೀಶ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಹರಿಹಾಯದ್ರು...
ನಾಳೆ ನಗರದ ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಯಾವುದೇ ಜನರನ್ನು ಹೊರಹಾಕುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ.ಇದನ್ನು ಜನರು ಅರ್ಥಯ ಮಾಡಿಕೊಂಡಿದ್ದಾರೆ.ಮುಂಬರುವ ದಿನಗಳಲ್ಲಿ ಕೂಡ ಮುಸ್ಲಿಂ ಸಮುದಾಯದವರು ಅರ್ಥ ಮಾಡಿಕೊಂಡು ಕಾಂಗ್ರೆಸ್ ಹೊರಹಾಕಲಿದ್ದಾರೆ ಎಂದರು.
ನಾಳೆ ಅಮಿತ್ ಶಾ ಅವರು ಆಗಮಿಸುತ್ತಿದ್ದು,ಎಲ್ಲ ಗೊಂದಲಗಳಿಗೆ ಬಹಿರಂಗ ಸಭೆಯಲ್ಲಿ ಸ್ಪಷ್ಟನೆ ನೀಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಗೋ ಬ್ಯಾಕ್ ಅಮಿತ್ ಶಾ ಪ್ರತಿಭಟನೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅತಿ ಕಿಳ ಮಟ್ಟದ ರಾಜಕಾರಣ ಮಾಡುತ್ತಿದೆ.ಕಾಂಗ್ರೆಸ್ ಪಕ್ಷದವರಿಗೆ ಆರೋಪ ಮಾಡಲು ಯಾವುದೇ ವಿಷಯಗಳಿಲ್ಲ.ಈ ಹಿನ್ನಲೆಯಲ್ಲಿ ಬಿಜೆಪಿಯ ಮೇಲೆ ಬಿಜೆಪಿ ನಾಯಕರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಸಚಿವ ಸಂಪುಟದ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು,ನಾಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಸಭೆಯ ನಂತರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಯಡಿಯೂರಪ್ಪ ನಡುವೆ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದ ಅವರು, ಸಂಪುಟ ವಿಸ್ತರಣೆ ಬಗ್ಗೆ ಹೈ ಕಮಾಂಡ್ ತಿರ್ಮಾನ ಕೈಗೊಳ್ಳಲಿದೆ.ಅದರ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.

ಬೈಟ್ :- ಜಗದೀಶ್ ಶೆಟ್ಟರ್ ( ಸಚಿವರು)Conclusion:Yallappa kundagol
ETV Bharat Logo

Copyright © 2025 Ushodaya Enterprises Pvt. Ltd., All Rights Reserved.