ಹುಬ್ಬಳ್ಳಿ : ಕೋವಿಡ್ ಲಸಿಕೆ ಬಂದಾಗ ನೀವು ತೆಗೆದುಕೊಳ್ಳುತ್ತೀರಾ ಎಂದು ಕೇಳ್ತಾ ಇದ್ರು, ನನ್ನ ಸರದಿಗಾಗಿ ಕಾಯುತ್ತಿದ್ದೆ, ಇಂದು ನನ್ನ ಸರದಿ ಬಂದಿದೆ, ಲಸಿಕೆ ತೆಗೆದುಕೊಂಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಕೋವಿಡ್ ಲಸಿಕೆ ಪಡೆದು ಮಾತನಾಡಿದ ಅವರು, ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಇಲ್ಲ. ಲಸಿಕೆ ಪಡೆದುಕೊಂಡವರನ್ನು ನಾನು ಮಾತನಾಡಿಸಿದ್ದೇನೆ. ಜನರು ಮುಂದೆ ಬಂದು ಲಸಿಕೆ ತೆಗೆದುಕೊಳ್ಳಬೇಕು ಎಂದರು.
ಓದಿ : ಲಸಿಕೆ ಹಾಕಿಸಿಕೊಳ್ಳುವಂತೆ ಕೊರೊನಾ ವಾರಿಯರ್ಸ್ಗಳಿಗೆ ಸಿಎಂ ಬಿಎಸ್ವೈ ಮನವಿ
ನಟ ದರ್ಶನ್ ಅವರ ರಾಬರ್ಟ್ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಉಲ್ಲಂಘನೆ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ರಾಬರ್ಟ್ ಸಿನಿಮಾದ ಕಾರ್ಯಕ್ರಮಕ್ಕೆ ಹೋಗಿದ್ದೆ. ಅಲ್ಲಿ ಸಾಮಾಜಿಕ ಅಂತರ ನಿಯಮ ಪಾಲನೆಯಾಗಿಲ್ಲ. 30-40 ಸಾವಿರ ಜನ ಸೇರಿದ್ದರು, ಯಾರಿಗೆ ಹೇಳೋದು..? ಎಲ್ಲವನ್ನೂ ಸರ್ಕಾರ ಮಾಡಲು ಸಾಧ್ಯವಿಲ್ಲ. ಜನರೂ ಕೂಡ ಜಾಗೃತರಾಗಬೇಕು ಎಂದು ಹೇಳಿದರು.