ETV Bharat / state

ಧಾರವಾಡದಲ್ಲಿ ಎಫ್​​ಎಂಸಿಜಿ ಕ್ಲಸ್ಟರ್ ಸ್ಥಾಪನೆಗೆ ವಿಜನ್ ಗ್ರೂಪ್ ರಚನೆ - ಬೃಹತ್‌, ಮಧ್ಯಮ ಕೈಗಾರಿಕೆ ಸಚಿವ ಜಗದೀಶ್​​ ಶೆಟ್ಟರ್

ಕೈಗಾರಿಕಾ ವಸಾಹತು ಪ್ರದೇಶಗಳಿಗೆ ಇಂದು ಬೃಹತ್‌, ಮಧ್ಯಮ ಕೈಗಾರಿಕೆ ಸಚಿವ ಜಗದೀಶ್​​ ಶೆಟ್ಟರ್ ಭೇಟಿ ನೀಡಿದರು.

Hubli
ಹುಬ್ಬಳ್ಳಿ
author img

By

Published : Aug 17, 2020, 8:34 PM IST

ಹುಬ್ಬಳ್ಳಿ: ಧಾರವಾಡದ ವಿವಿಧ ಕೈಗಾರಿಕಾ ಪ್ರದೇಶಗಳ ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ವಿಧಿಸುವ ತೆರಿಗೆ ಆಕರಣೆ ಹಾಗೂ ನಿರ್ವಹಣೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಶೀಘ್ರ ಪರಿಹಾರ ಒದಗಿಸಲಾಗುವುದು ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಸಚಿವ ಜಗದೀಶ್​​ ಶೆಟ್ಟರ್ ಹೇಳಿದರು.

ಹುಬ್ಬಳ್ಳಿ ಗೋಕುಲ ರಸ್ತೆಯ ಎಂ.ತಿಮ್ಮಸಾಗರ, ತಾರಿಹಾಳ, ಗಾಮನಗಟ್ಟಿ, ಇಟ್ಟಿಗಟ್ಟಿ ಹಾಗೂ ಧಾರವಾಡದ ಬೇಲೂರು, ಮಮ್ಮಿಗಟ್ಟಿ ಕೈಗಾರಿಕಾ ಪ್ರದೇಶಗಳು ಮತ್ತು ಕೆಎಸ್​ಎಸ್​ಐಡಿಸಿ ಯ ಕೈಗಾರಿಕಾ ವಸಾಹತು ಪ್ರದೇಶಗಳಿಗೆ ಇಂದು ಭೇಟಿ ನೀಡಿದ ಸಚಿವರು, ಸ್ಥಳೀಯ ಉದ್ಯಮಿಗಳಿಂದ ಅಹವಾಲುಗಳನ್ನು ಆಲಿಸಿದರು. ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ವಸತಿ ಗೃಹಗಳ ಹಂಚಿಕೆ, ಗಾಮನಗಟ್ಟಿ ಮಹಿಳಾ ಉದ್ಯಮಿ ಪಾರ್ಕ್ ನಿವೇಶನಗಳ ಕುರಿತು ಶೀಘ್ರ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಹುಬ್ಬಳ್ಳಿ ನಗರದ ಖಾಸಗಿ ಹೋಟೆಲ್​ನಲ್ಲಿ ಕೈಗಾರಿಕಾ ಉದ್ಯಮಿಗಳ ಸಂಘದ ಪದಾಧಿಕಾರಿಗಳೊಂದಿಗೆ ಅನೌಪಚಾರಿಕವಾಗಿ ಸಭೆ ನಡೆಸಿದ ಸಚಿವರು, ಲಾಕ್​ಡೌನ್ ಹಾಗೂ ಈಗ ಮಳೆಯ ಕಾರಣದಿಂದ ಎಂ. ತಿಮ್ಮಸಾಗರ ಕೈಗಾರಿಕಾ ಪ್ರದೇಶದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲಿ ಸ್ವಲ್ಪ ವಿಳಂಬವಾಗಿದೆ. ಕಾಮಗಾರಿಗಳು ಪೂರ್ಣಗೊಂಡ ಬಳಿಕ ಇದು ಮಾದರಿ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ ಹೊಂದಲಿದೆ. ಹೊಸ ಕೈಗಾರಿಕಾ ನೀತಿ, ಭೂ ಸುಧಾರಣೆ ಕಾಯ್ದೆಯ ತಿದ್ದುಪಡಿಗಳಿಂದ ಬಹಳಷ್ಟು ಉದ್ಯಮಿಗಳು ಬಂಡವಾಳ ಹೂಡಿಕೆಗೆ ಉತ್ಸುಕರಾಗಿದ್ದಾರೆ ಎಂದರು.

ಧಾರವಾಡದಲ್ಲಿ ಎಫ್ಎಂಸಿಜಿ ಕ್ಲಸ್ಟರ್ ಸ್ಥಾಪನೆಗೆ ಉಲ್ಲಾಸ ಕಾಮತ್ ಅವರ ಅಧ್ಯಕ್ಷತೆಯಲ್ಲಿ ವಿಜನ್ ಗ್ರೂಪ್ ರಚಿಸಲಾಗಿದೆ. ಈ ಸಮಿತಿ ಈಗಾಗಲೇ ಕಾರ್ಯ ಆರಂಭಿಸಿದೆ. ಕೋವಿಡ್ ಪರಿಸ್ಥಿತಿಯಲ್ಲಿಯೂ ಸುಮಾರು 30 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಗೆ ಪ್ರಸ್ತಾವನೆ ಬಂದಿದ್ದು, ಸರ್ಕಾರ ಅನುಮೋದನೆ ನೀಡಿದೆ. ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಿರಂತರವಾಗಿ ಈ ಕುರಿತು ಹಿರಿಯ ಅಧಿಕಾರಿಗಳ ಸಭೆಗಳನ್ನು ಆಯೋಜಿಸಲಾಗಿದೆ.

ಕೈಗಾರಿಕಾ ವಸಾಹತು ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಜಗದೀಶ್​ ಶೆಟ್ಟರ್

ಕೆಐಎಡಿಬಿ ಹಾಗೂ ಕೆಎಸ್​ಎಸ್​ಐಡಿಸಿ ಸರ್ಕಾರದ ಸ್ವಾಯತ್ತ ಸಂಸ್ಥೆಗಳಾಗಿದ್ದು, ಲಾಭದ ಉದ್ದೇಶವಿಲ್ಲದೇ ಆದಾಯ, ಖರ್ಚು ಸರಿದೂಗಿಸಿಕೊಂಡು ಉದ್ಯಮಿಗಳಿಗೆ ಸೌಕರ್ಯ ಕಲ್ಪಿಸುತ್ತಿವೆ. ಜಿ.ಡಿ.ಪಿ ಹಾಗೂ ಉದ್ಯೋಗ ಸೃಜನೆಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ಮಹತ್ವದ್ದಾಗಿದೆ. ಪ್ರತಿ ವರ್ಷ ನಿವೇಶನ ದರ ಪರಿಷ್ಕರಿಸುವ ಪದ್ಧತಿ ಕೈಬಿಡಲು ಮುಖ್ಯಮಂತ್ರಿಗಳನ್ನು ಕೋರಲಾಗುವುದು. ತಾರಿಹಾಳ ಪ್ರದೇಶದಲ್ಲಿ ಟೌನ್​ಶಿಪ್ ಅಭಿವೃದ್ಧಿಪಡಿಸಲಾಗುವುದು ಎಂದರು.

ಶಾಸಕ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಶಿವಶಂಕರ, ಕೆಎಸ್​ಎಸ್​ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಮಹೇಶ ಶಿರೂರ, ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.