ಹುಬ್ಬಳ್ಳಿ: ಸಿಎಂ ಬದಲಾವಣೆ ವಿಚಾರದಲ್ಲಿ ಈಗಾಗಲೇ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಪಕ್ಷ ಹಾಗೂ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಕಾದು ನೋಡಬೇಕಷ್ಟೆ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ರಾಜಕೀಯ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಹೋಗಿರಲಿಲ್ಲ. ಇಲಾಖೆ ವಿಚಾರವಾಗಿ ಗುಜರಾತ್- ದೆಹಲಿಗೆ ಹೋಗಿದ್ದು, ಇಲಾಖೆ ಕೆಲಸಕ್ಕಾಗಿಯೇ ರಾಮನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ರಕ್ಷಣಾ ಇಲಾಖೆಗೆ ಕ್ಲಸ್ಟರ್ ನೀಡುವ ಕುರಿತು ಚರ್ಚಿಸಿದ್ದೇನೆ ಎಂದರು.
ಸಂಪುಟದಿಂದ ಶೆಟ್ಟರ್ ಕೈಬಿಡುವ ವಿಚಾರವಾಗಿ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಈಗಾಗಲೇ ಆಡಿಯೋ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆಡಿಯೋ ಬಗ್ಗೆ ತನಿಖೆ ನಡೆಯುತ್ತಿದೆ. ಈಗಲೇ ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಹೇಳಿದರು.
ಓದಿ: ಸಿಎಂ ಯಡಿಯೂರಪ್ಪ ಬೆನ್ನಿಗೆ ಸ್ವಪಕ್ಷದವರೇ ಚೂರಿ ಹಾಕಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್