ಧಾರವಾಡ : ಮುಖ್ಯಮಂತ್ರಿ ಬದಲಾವಣೆ ವಿಚಾರ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಏಕೆ ನಡೆಯುತ್ತಿದೆ ಎಂಬುದು ನಮಗೆ ಗೊತ್ತಾಗುತ್ತಿಲ್ಲ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಚೇಂಜ್ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟೀಕರಣ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ನೇತೃತ್ವದಲ್ಲಿ ನಾವು ಸರ್ಕಾರ ನಡೆಸುತ್ತೇವೆ. ಯಾವುದೇ ಕಾರಣಕ್ಕೂ ಅವರು ಬದಲಾವಣೆ ಆಗುವುದಿಲ್ಲ. ಆ ವಿಚಾರವಾಗಿ ಯಾರು ಮಾತನಾಡುತ್ತಿದ್ದಾರೋ ಅವರನ್ನೇ ಕೇಳಬೇಕು ಎಂದು ಹೇಳಿದ್ರು.