ETV Bharat / state

ಎಸ್​ಎಸ್​ಎಲ್​ಸಿ ಪರೀಕ್ಷೆ ಸಮರ್ಪಕ ನಿರ್ವಹಣೆಗೆ ಸಚಿವ ಜಗದೀಶ್​ ಶೆಟ್ಟರ್​ ಸೂಚನೆ

author img

By

Published : Jun 17, 2020, 9:00 PM IST

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಿರ್ವಹಣೆ ಬಗ್ಗೆ ಸಭೆ ನಡೆಸಲಾಯಿತು.

Jagadeesh shettar
Jagadeesh shettar

ಧಾರವಾಡ : ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸಮರ್ಪಕವಾಗಿ ಆಯೋಜಿಸುವುದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಸವಾಲಾಗಿದೆ. ಪ್ರತಿಯೊಬ್ಬ ಅಧಿಕಾರಿ, ಶಿಕ್ಷಕರು ಮತ್ತು ಸಿಬ್ಬಂದಿ ವಿಶೇಷ ಎಚ್ಚರಿಕೆ ವಹಿಸಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 27,841 ಮಕ್ಕಳಿಗೆ 117 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಆಯೋಜಿಸಬೇಕು. ಜಿಲ್ಲೆಯ ಎಲ್ಲಾ ಬಿಇಓಗಳು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಎಲ್ಲಾ ವಿದ್ಯಾರ್ಥಿಗಳನ್ನು ಖುದ್ದಾಗಿ ಸಂಪರ್ಕಿಸಿ ಅವರ ಸಾರಿಗೆ ವ್ಯವಸ್ಥೆ ಖಚಿತಪಡಿಸಿಕೊಳ್ಳಬೇಕು. ಇದಕ್ಕಾಗಿ ಸೂಕ್ಷ್ಮ ಯೋಜನೆ ಮಾಡಬೇಕು. ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ನಿಯಂತ್ರಣ, ಮೆಕ್ಕೆಜೋಳ ಬೆಳೆದ ರೈತರು, ಆಟೋ ಚಾಲಕರು, ಕಾರ್ಮಿಕರು, ಮೊದಲಾದ ವರ್ಗಗಳಿಗೆ ಪರಿಹಾರ ವಿತರಣೆ, ಕೈಗಾರಿಕೆಗಳ ಪುನರಾರಂಭ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಸಭೆಯಲ್ಲಿ ಸಚಿವರು ಚರ್ಚಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸುಜಾತಾ ಹಸವೀಮಠ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ 21,463 ಜನರ ಗಂಟಲುದ್ರವ ತಪಾಸಣೆ ಮಾಡಲಾಗಿದೆ. 21,100 ಜನರ ವರದಿಗಳು ನೆಗೆಟಿವ್ ಬಂದಿವೆ. 250 ಜನರ ವರದಿಗಾಗಿ ಕಾಯಲಾಗುತ್ತಿದೆ. ಇದುವರೆಗೆ 163 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. 51 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 109 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್, ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಜಿಪಂ ಸಿಇಓ ಡಾ.ಬಿ.ಸಿ. ಸತೀಶ್, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.