ಹುಬ್ಬಳ್ಳಿ: ಮಹಾದಾಯಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವುದು ಸ್ವಾಗತಾರ್ಹ. ಉತ್ತರ ಕರ್ನಾಟಕದ ಜನತೆಗೆ ಮಾತ್ರವಲ್ಲದೆ ರಾಜ್ಯದ ಜನತೆಗೆ ಇದು ಖುಷಿಯ ಕ್ಷಣ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದರು.
ಮಹಾದಾಯಿ ಯೋಜನೆಯ ಕುರಿತು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ಕುರಿತು ಮಾಧ್ಯಮದ ಜೊತೆ ಮಾತನಾಡಿ, ಸುಮಾರು ದಿನಗಳ ಹೋರಾಟಕ್ಕೆ ಸಿಕ್ಕ ಜಯ ಇದಾಗಿದೆ. ಎರಡು ದಿನದ ಹಿಂದೆ ರಾಜ್ಯ ಹಾಗೂ ಕೇಂದ್ರ ಸಚಿವರು ಕೂಡಿಕೊಂಡು ಕೇಂದ್ರ ನೀರಾವರಿ ಸಚಿವ ಶೇಕಾವತ ಅವರನ್ನು ಭೇಟಿಯಾಗಿ ಮಾತನಾಡಿದ್ದೆವು. ಅವರು ಕೂಡ ಭರವಸೆಯನ್ನು ನೀಡಿದ್ದರು. ಆ ಭರವಸೆಯಂತೆ ಒಂದೇ ದಿನದಲ್ಲಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವುದು ಸಂತಸ ತಂದಿದೆ ಎಂದರು.
ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವುದು ರಾಜ್ಯಕ್ಕೆ ಸಿಕ್ಕಿರುವ ದೊಡ್ಡ ಜಯವಾಗಿದೆ ಎಂದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ನೀರಾವರಿ ಸಚಿವ ಶೇಕಾವತ್ ಅವರಿಗೆ ಸಚಿವ ಅಭಿನಂದನೆ ಸಲ್ಲಿಸಿದರು.