ETV Bharat / state

ಅಗ್ನಿ ದುರಂತಕ್ಕೊಳಗಾದ ಕಾರ್ಖಾನೆಗೆ ಭೇಟಿ ನೀಡಿದ ಸಚಿವ ಜೋಶಿ - ಪ್ರಲ್ಹಾದ್ ಜೋಶಿ ಒಡೆತನದ ವಿಭವ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ಅಗ್ನಿ ಅವಘಡ

ತಾಲೂಕಿನ ಶೆರೆವಾಡದಲ್ಲಿರುವ ಸಚಿವ ಪ್ರಹ್ಲಾದ್ ಜೋಶಿ ಒಡೆತನದ ವಿಭವ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ಬೆಂಕಿ ತಗುಲಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪರಿಶೀಲನೆ ನಡೆಸಿದರು.

Prlahada_Joshi
ಬೆಂಕಿ ಅವಘಡ ಸಂಭವಿಸಿದ್ದ ವಿಭವ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಜೋಶಿ
author img

By

Published : Oct 27, 2020, 5:14 PM IST

Updated : Oct 27, 2020, 6:59 PM IST

ಹುಬ್ಬಳ್ಳಿ: ತಾಲೂಕಿನ ಶೆರೆವಾಡ ಗ್ರಾಮದಲ್ಲಿರುವ ವಿಭವ ಇಂಡಸ್ಟ್ರೀಸ್​ಗೆ ಸೇರಿದ ಗೋದಾಮಿನಲ್ಲಿ ಸೋಮವಾರ ಬೆಂಕಿ ತಗುಲಿ ಅಪಾರ ಪ್ರಮಾಣದ ಪಿನಾಯಿಲ್ ಹಾಗೂ ಮಂಕಿ ಪೊರಕೆಗಳು ಬೆಂಕಿಗೆ ಆಹುತಿಯಾಗಿದ್ದರ ಹಿನ್ನೆಲೆ ಕಾರ್ಖಾನೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭೇಟಿ ನೀಡಿ ಪರಿಶೀಲಿಸಿದರು‌.

ತಾಲೂಕಿನ ಶೆರೆವಾಡದಲ್ಲಿರುವ ಸಚಿವ ಪ್ರಹ್ಲಾದ್​ ಜೋಶಿ ಒಡೆತನದ ವಿಭವ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ಬೆಂಕಿ ತಗುಲಿತ್ತು. ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪರಿಶೀಲನೆ ನಡೆಸಿ ನಂತರ ಮಾತನಾಡಿದರು. ಬೆಂಕಿ ಅವಘಡದಿಂದ ಸಾಕಷ್ಟು ಪ್ರಮಾಣದ ಹಾನಿಯಾಗಿದೆ.

ಬೆಂಕಿ ಅವಘಡ ಸಂಭವಿಸಿದ್ದ ವಿಭವ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಜೋಶಿ

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಹೆಸ್ಕಾಂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಘಟನೆಗೆ ಏನು ಕಾರಣ ಎಂಬ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು. ಈ ಘಟನೆ ಕುರಿತು ಯಾರನ್ನೂ ದೂಷಿಸುವುದಿಲ್ಲ ಎಂದರು.

ಅನೇಕ ಕಡೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇಂತಹ ಅವಘಡಗಳು ಮರಳಿ ಸಂಭವಿಸದಂತೆ ಮುಂಜಾಗ್ರತಾ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Last Updated : Oct 27, 2020, 6:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.