ETV Bharat / state

ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ವಿಚಾರ: ಸಚಿವ ಮಹದೇವಪ್ಪ ಸ್ಪಷ್ಟನೆ

ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಾ. ಹೆಚ್​. ಸಿ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ಸಚಿವ ಡಾ. ಹೆಚ್​. ಸಿ ಮಹದೇವಪ್ಪ
ಸಚಿವ ಡಾ. ಹೆಚ್​. ಸಿ ಮಹದೇವಪ್ಪ
author img

By ETV Bharat Karnataka Team

Published : Nov 8, 2023, 6:27 PM IST

Updated : Nov 8, 2023, 7:17 PM IST

ಸಚಿವ ಡಾ ಹೆಚ್​ ಸಿ ಮಹದೇವಪ್ಪ

ಧಾರವಾಡ : ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಾ. ಹೆಚ್​.ಸಿ. ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ನಂಜನಗೂಡು ಉಪ ಚುನಾವಣೆಯಲ್ಲಿ ಸೊಂಟಕ್ಕೆ ಪೆಟ್ಟಾಗಿತ್ತು. ಒಳಗಡೆ ಕೀವಾಗಿ ಕಾಲು ಎತ್ತದಂತಾಗಿತ್ತು. ಅಂದಿನಿಂದ ಈ ಸಮಸ್ಯೆ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕುಳಿತರೆ ಬೇಗ ಏಳಲು ಆಗೋದಿಲ್ಲ. ಬಗ್ಗಲು ಕೂಡ ಸಾಧ್ಯವಾಗೋದಿಲ್ಲ. ಎಷ್ಟೋ ಜನ ಕಾಲು ಮುಂದಕ್ಕೆ ಇಟ್ಟು ನಮಸ್ಕಾರ ಮಾಡಿಸಿಕೊಳ್ಳೋರಿದ್ದಾರೆ. ಹಾಗೆ ನಾನು ಮಾಡುವವನಲ್ಲ. ನೀವು ಇದನ್ನು ಗಮನಿಸಿದ್ದು ಸಂತಸ ತಂದಿದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದಂತಾಗುತ್ತೆ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ.

ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ. ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ. ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟ. ಹಾಗಾಗಿ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ. ಬಹು ವರ್ಷಗಳ ಕಾಲದಿಂದ ನನ್ನೊಡನೆಯೇ ಒಂದು ಕುಟುಂಬದಂತಿರುವ ನಮ್ಮ ಕೆಲವು ಸಿಬ್ಬಂದಿ ಬಳಿ ಕಾಲಿನ ಸಮಸ್ಯೆ ಹಿನ್ನೆಲೆ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದೆ. ಅನಗತ್ಯವಾಗಿ ಇದಕ್ಕೆ ಅಹಂಕಾರ, ಅಧಿಕಾರದ ಅಮಲು ಎಂಬ ಶಬ್ಧಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ. ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿದೆ. ಹಾಗಾಗಿ ಈ ಬಗ್ಗೆ ಸ್ವಯಂ ವಿವರಣೆ ಕೊಡುವುದಾಗಲಿ, ಇಲ್ಲವೇ ಸ್ವಮರುಕ ಪಡುವುದಾಗಲಿ ನಾನು ಮಾಡುವುದಿಲ್ಲ. ಮೂಲತಃ ಸಂವಿಧಾನದ ಆಶಯಗಳ ಪ್ರಕಾರವೇ ಬದುಕುವ ನನಗೆ ಸಮಾನತೆ, ವ್ಯಕ್ತಿ ಗೌರವ, ಪ್ರೀತಿ ವಿಶ್ವಾಸ ಹೊರತುಪಡಿಸಿ ಇತರೆ ಸಂಗತಿಗಳಲ್ಲಿ ಆಸಕ್ತಿ ಇಲ್ಲ. ದೈಹಿಕ ತೊಂದರೆಗಾಗಿ ಪಡೆದ ಸಹಾಯವನ್ನು ಸಂಕುಚಿತ ಮನಸ್ಸಿನಿಂದ ನೋಡಬಾರದೆಂದು ನಮ್ಮ ಮಾಧ್ಯಮ ಮಿತ್ರರಲ್ಲಿ ನಾನು ಮನವಿ ಮಾಡುತ್ತೇನೆ. ಇನ್ನು ಅಗತ್ಯ ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ನನ್ನ ಧನ್ಯವಾದಗಳು. - ಹೆಚ್.ಸಿ. ಮಹದೇವಪ್ಪ, ಸಚಿವರು

ಆಪರೇಷನ್ ಕಮಲದ ಬಗ್ಗೆ ಡಿಕೆಶಿ ಹೇಳಿಕೆ ವಿಚಾರ ಕುರಿತು ಮಾತನಾಡಿದ ಅವರು, ನಮ್ಮ ಅಧ್ಯಕ್ಷರಿಗೆ ಮಾಹಿತಿ ಇರುತ್ತದೆ. ಹೀಗಾಗಿ ಅವರು ಹೇಳಿರುತ್ತಾರೆ. ನಾನು ಅಧಿಕಾರಿಗಳ ಸಭೆಯಲ್ಲಿದ್ದೇನೆ. ಹೀಗಾಗಿ ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಮಗಿಂತ ಮಾಧ್ಯಮಗಳಿಗೆ ಹೆಚ್ಚು ಮಾಹಿತಿ ಇದೆ. ಬಹುಮತವಿಲ್ಲದೆ ಬಿಜೆಪಿ ಎರಡು ಸಲ ಅಧಿಕಾರಕ್ಕೆ ಬಂದಿದೆ‌. ಅದು ಹೇಗೆ ಬಂದಿದ್ದು ಅನ್ನೋದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಇತಿಹಾಸವೇ ಹಾಗಿದೆ. ಆ ಇತಿಹಾಸವನ್ನು ಮಾಧ್ಯಮದವರೇ ಹೇಳಿ ಬಿಡಲಿ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಬಿಜೆಪಿ ಬರ ಅಧ್ಯಯನದ ಬಗ್ಗೆ ಎಸ್ ಟಿ ಸೋಮಶೇಖರ್​ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಬರ ಅಧ್ಯಯನದ ಬದಲು ಕೇಂದ್ರ ಸರ್ಕಾರದ ಮನವೊಲಿಸಿ ಅಂದಿರೋ ವಿಚಾರವನ್ನು ಅವರು ಸರಿಯಾಗಿಯೇ ಹೇಳಿದ್ದಾರೆ. ಅವರು ಆ ಬಗ್ಗೆ ಕರಾರುವಕ್ಕಾಗಿ ಹೇಳಿದ್ದಾರೆ. ಕೇಂದ್ರಕ್ಕೆ ಹೋಗಿ ಕೇಳಿ ಅಂದಿದ್ದಾರೆ. ಬರದ ಎಲ್ಲ ವರದಿಯನ್ನೂ ನೀಡಲಾಗಿದೆ‌. ರಾಜ್ಯದ ಜನರ ಹಿತ ಕಾಯಬೇಕೆಂದಿದ್ದರೆ ಕೇಂದ್ರಕ್ಕೆ ಕೇಳಲಿ. ಸಂಕಷ್ಟದಲ್ಲಿರೋ ರೈತರಿಗೆ ಪರಿಹಾರ ಕೊಡಬೇಕೆಂದರೆ ಕೇಂದ್ರವನ್ನು ಕೇಳಲಿ. ರೂ. 4000 ಕೋಟಿ ಹಣ ಕೇಳಲಾಗಿದೆ. ದಯವಿಟ್ಟು ಆ ಹಣವನ್ನು ನೀಡುವಂತೆ ಕೇಳಲಿ ಎಂದು ಒತ್ತಾಯಿಸಿದರು.

ಇಂದು ಬೆಳಗ್ಗೆ ಇಲ್ಲಿನ ಸರ್ಕಾರಿ ಹಾಸ್ಟೆಲ್​​ಗೆ ಭೇಟಿ ನೀಡಿದ್ದ ಸಚಿವ ಹೆಚ್ ಸಿ ಮಹದೇವಪ್ಪ ವಿದ್ಯಾರ್ಥಿಗಳ ಅಹವಾಲು ಆಲಿಸಿದ್ದರು. ನಗರದ ಸಪ್ತಾಪುರದಲ್ಲಿರುವ ವಿದ್ಯಾರ್ಥಿ ನಿಲಯಕ್ಕೆ ತೆರಳಿದ್ದ ಸಚಿವರ ಬಳಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದರು. ಈ ವೇಳೆ ಸಚಿವ ಮಹದೇವಪ್ಪ ಅವರು ಅಧಿಕಾರಿಗಳಿಂದ ವಿವಿಧ ಮಾಹಿತಿ ಪಡೆದುಕೊಂಡರು.

ಬಳಿಕ ಸಚಿವರು ಊಟದ ವ್ಯವಸ್ಥೆ ಸೇರಿ ಹಾಸ್ಟೆಲ್​ನ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಡುಗೆ ಮನೆಗೆ ತೆರಳಿ ವಾಪಸ್ ಆಗಿದ್ದ ಅವರು ಅಂಗರಕ್ಷಕನ ಕೈಯಿಂದ ಶೂ ಹಾಕಿಸಿಕೊಂಡ ಘಟನೆ ನಡೆಯಿತು. ಹಾಸ್ಟೆಲ್​ನ ಅಡುಗೆ ಮನೆಗೆ ಭೇಟಿ ನೀಡಿದ್ದ ಸಂದರ್ಭ ಸಚಿವರು ಶೂ ಹೊರಗಡೆಯೇ ಬಿಚ್ಚಿಟ್ಟಿದ್ದರು. ಈ ಕುರಿತು ಸಚಿವರು ಈಗ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಧಾರವಾಡ: ಅಂಗರಕ್ಷಕನಿಂದ ಶೂ ತೊಡಿಸಿಕೊಂಡ ಸಚಿವ ಮಹದೇವಪ್ಪ

Last Updated : Nov 8, 2023, 7:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.