ETV Bharat / state

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಲಾಂಛನ ಬಿಡುಗಡೆ ಮಾಡಿದ ಸಚಿವ ಮುನೇನಕೊಪ್ಪ - ಬಿಜೆಪಿ ರಾಜ್ಯ ಕಾರ್ಯಕಾರಿಣಿ ಲಾಂಛನ ಬಿಡುಗಡೆ

ರಾಜ್ಯ ಕಾರ್ಯಕಾರಿಣಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಭೋಜನ‌ ವ್ಯವಸ್ಥೆ ಸೇರಿದಂತೆ ವಸತಿ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕಾರಿಣಿಯಲ್ಲಿ ದೇಶಕ್ಕೆ ಹಾಗೂ ರಾಜ್ಯಕ್ಕೆ ಒಳ್ಳೆಯದಾಗುವ ಎರಡು ಪ್ರಮುಖ ನಿರ್ಣಯ ಮಾಡಲಾಗುವುದು..

minister-muneenakoppa-releases-the-bjp-state-executive-logo
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಲಾಂಛನ ಬಿಡುಗಡೆ ಮಾಡಿದ ಸಚಿವ ಮುನೇನಕೊಪ್ಪ
author img

By

Published : Dec 26, 2021, 4:18 PM IST

ಹುಬ್ಬಳ್ಳಿ : ಬಿಜೆಪಿ ರಾಜ್ಯ ಕಾರ್ಯಕಾರಿಣಿ ಡಿ. 28, 29ರಂದು ಹುಬ್ಬಳ್ಳಿ ನಗರದಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಬಿಡುಗಡೆ ಮಾಡಿದರು.

ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಮಾತನಾಡಿರುವುದು..

ನಗರದ ಸರ್ಕ್ಯೂಟ್ ಹೌಸ್​ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಘೋಷಣೆ ನಂತರ ಮೊದಲ ಬಾರಿಗೆ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಹುಬ್ಬಳ್ಳಿ ನಗರದಲ್ಲಿ ಮಾಡಲಾಗುತ್ತಿದೆ.

ರಾಜ್ಯ ಕಾರ್ಯಕಾರಿಣಿಗೆ ರಾಷ್ಟ್ರೀಯ, ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್​ಕುಮಾರ್​ ಕಟೀಲ್, ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ, ಅರುಣ್​ಸಿಂಗ್, ಅರುಣಾ, ಸಿ. ಟಿ ರವಿ ಸೇರಿದಂತೆ ರಾಜ್ಯದ ಮುಂತಾದ ಗಣ್ಯರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯ ಕಾರ್ಯಕಾರಿಣಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಭೋಜನ‌ ವ್ಯವಸ್ಥೆ ಸೇರಿದಂತೆ ವಸತಿ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕಾರಿಣಿಯಲ್ಲಿ ದೇಶಕ್ಕೆ ಹಾಗೂ ರಾಜ್ಯಕ್ಕೆ ಒಳ್ಳೆಯದಾಗುವ ಎರಡು ಪ್ರಮುಖ ನಿರ್ಣಯ ಮಾಡಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ ಸೋಲು ಆತ್ಮಾವಲೋಕನ ಮಾಡಲಾಗುವುದು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವನ್ನು ಸ್ವಾಗತ ಮಾಡಬೇಕು. ಹಾಗಾಗಿ, ಸೋಲು ಗೆಲುವನ್ನು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದ ಅವರು, ಸಿಎಂ ಬದಲಾವಣೆ ಊಹಾಪೋಹಗಳಿಗೆ ಸಂಬಂಧಿಸಿದಂತೆ ಈಗಾಗಲೇ ನಮ್ಮ‌ ನಾಯಕರು ಸ್ಪಷ್ಟಪಡಿಸಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಹು-ಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಲಿಂಗರಾಜ ಪಾಟೀಲ್, ದತ್ತಮೂರ್ತಿ ಕುಲಕರ್ಣಿ, ರವಿ ನಾಯ್ಕ ಇದ್ದರು.

ಓದಿ: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ಮಾರ್ಗಸೂಚಿ ಬಿಡುಗಡೆ: ಯಾವುದಕ್ಕೆ ನಿರ್ಬಂಧ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.