ETV Bharat / state

ಸಾರಿಗೆ ನೌಕರರ ಮುಷ್ಕರ ವಿಚಾರದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ: ಪ್ರಹ್ಲಾದ್ ಜೋಶಿ - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಸಾರಿಗೆ ನೌಕರರ ಮುಷ್ಕರ ವಿಚಾರದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಆದರೆ, ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಸಿದ್ಧವಾಗಿದೆ. ಅವರು ಕರ್ತವ್ಯಕ್ಕೆ ಹಾಜರಾಗಿ ಸರ್ಕಾರದ ಜೊತೆ ಮಾತುಕತೆಗೆ ಮುಂದಾಗಲಿ ಎಂದಿದ್ದಾರೆ.

Minister Prahalad joshi
ಪ್ರಹ್ಲಾದ್ ಜೋಶಿ
author img

By

Published : Apr 9, 2021, 5:23 PM IST

ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರಲ್ಲಿ ಕೆಲವೊಂದಿಷ್ಟು ಜನ ರಾಜಕಾರಣ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ನಗರದಲ್ಲಿಂದು ಜಲಶಕ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅತ್ಯಂತ ಭೀಕರ ಸ್ಥಿತಿಯಲ್ಲಿ ಎಲ್ಲರಿಗೂ ವೇತನ ಕೊಟ್ಟಿದ್ದಾರೆ. ಉಳಿದ ಎಲ್ಲವನ್ನೂ ಸಹಾನುಭೂತಿಯಿಂದ ಸರ್ಕಾರ ಪರಿಶೀಲನೆ ಮಾಡಲು ಸಿದ್ಧ. ಈಗ ತಕ್ಷಣವೇ ಕೆಲಸಕ್ಕೆ ಹಾಜರಾಗಿ ಎಂದು ಮನವಿ ಮಾಡಿದರು.

ಸಾರಿಗೆ ನೌಕರರ ಮುಷ್ಕರದ ಕುರಿತು ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಉಳಿದ ಎಲ್ಲವನ್ನೂ ಸರ್ಕಾರ ಮಾತುಕತೆ ಮೂಲಕ ಪರಿಹಾರ ಮಾಡಲು ಸಿದ್ಧವಿದೆ ಎಂದು ಸಿಎಂ ಹೇಳಿದ್ದಾರೆ. ಇದರಲ್ಲಿ ಕಾಂಗ್ರೆಸ್ ಸಹ ರಾಜಕಾರಣ ಮಾಡುತ್ತಿದೆ. ಅಲ್ಲದೇ ಪ್ರತಿಭಟನೆಯ ಲೀಡ್ ಪಡೆದವರು ಸಹ ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಇದನ್ನೂ ಓದಿ: ರಾಜ್ಯಮಟ್ಟದ ಜಲಶಕ್ತಿ ಅಭಿಯಾನ ಉದ್ಘಾಟಿಸಿದ ಕೆ.ಎಸ್ ಈಶ್ವರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.