ETV Bharat / state

ದಾವೂದ್ ಇಬ್ರಾಹಿಂಗೂ ಕಾಂಗ್ರೆಸ್‌ನವರು ಭಾರತರತ್ನ ಕೊಡಲಿದ್ದಾರೆ: ಪ್ರಹ್ಲಾದ್ ಜೋಶಿ ವ್ಯಂಗ್ಯ

ಮಾಜಿ ಸಿಎಂ ಸಿದ್ದರಾಮಯ್ಯ ವೀರ್ ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡುಗಿದ್ದಾರೆ.

author img

By

Published : Oct 19, 2019, 2:04 PM IST

Updated : Oct 19, 2019, 3:12 PM IST

ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್​ ಜೋಷಿ ವಾಗ್ದಾಳಿ

ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ವೀರ್ ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡುಗಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಧೈರ್ಯ ಇದ್ದರೆ ಅಂಬೇಡ್ಕರ್​ಗೆ ಮೊದಲೇ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು. ಅಂಬೇಡ್ಕರ್ ಅವರಿಗೆ ಮೊದಲು ಭಾರತರತ್ನ ನೀಡದೇ ರಾಜೀವ್​​ಗಾಂಧಿಯವರಿಗೆ ಕೊಡಲಾಗಿದೆ. ಅವರ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಈ ಪ್ರಶಸ್ತಿ ಬಳುವಳಿ ಬಂತು. ಸಂವಿಧಾನ ಬರೆದಿರುವ ಅಂಬೇಡ್ಕರ್ ಅವರಿಗೆ ಈ ಮಹೋನ್ನತ ಪ್ರಶಸ್ತಿ ನೀಡಲಿಲ್ಲ ಎಂದರು.

ದೇಶ ಕಂಡ ಅಪ್ರತಿಮ ವೀರ ಸಾವರ್ಕರ್. ಅವರ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ. ಸಿದ್ಧರಾಮಯ್ಯ ಅವರ ಈ ನಡೆಯನ್ನ ನಾನು ಖಂಡಿಸುತ್ತೇನೆ. ಮುಂದೆ ದಾವುದ್ ಇಬ್ರಾಹಿಂಗೂ ಕಾಂಗ್ರೆಸ್‌ನವರು ಭಾರತ ರತ್ನ ಕೊಡಲಿದ್ದಾರೆಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮೊದಲು ಇತಿಹಾಸ ಸರಿಯಾಗಿ ಓದಿಕೊಂಡು ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್​ ಜೋಷಿ ವಾಗ್ದಾಳಿ

ಇದೇ ವೇಳೆ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಯಾವುದೇ ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಪೂರ್ಣಾವಧಿ ಬಿಜೆಪಿ ಸರ್ಕಾರ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಹದಾಯಿ ಹೋರಾಟಗಾರರು ಪ್ರತಿಭಟನೆಗೆ ಕುಳಿತಿರುವುದು ನನ್ನ ಗಮನಕ್ಕೆ ಬಂದಿಲ್ಲ. ಮಹದಾಯಿ ಇತ್ಯರ್ಥಕ್ಕೆ ನಮ್ಮ ಕಡೆಯಿಂದ ಪ್ರಯತ್ನ ಮಾಡುತ್ತಿದ್ದೇವೆ. ಆದಷ್ಟು ಶೀಘ್ರ ಈ ವಿಚಾರ ಇತ್ಯರ್ಥಗೊಳ್ಳಲಿದೆ ಎಂದರು.

Intro:ಹುಬ್ಬಳ್ಳಿ -01
ಸಿದ್ಧರಾಮಯ್ಯನವರು ವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್ ಗೆ ಮೊದಲೇ ಭಾರತರತ್ನ ಕೊಡಿ ಅಂತಾ ಕೇಳಬೇಕಿತ್ತು. ಅಂಬೇಡ್ಕರ್ ಅವರಿಗೆ ಮೊದಲು ಭಾರತರತ್ನ ನೀಡದೇ ರಾಜೀವಗಾಂಧಿಯವರಿಗೆ ಕೊಡಲಾಯಿತು ಅವರ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಸಂವಿಧಾನ ಬರೆದಿರುವ ಅಂಬೇಡ್ಕರ್ ಅವರಿಗೆ ಕೊಡಲಿಲ್ಲ. ದೇಶಕಂಡ ಅಪ್ರತಿಮ ವೀರ ಸಾವರ್ಕರ್ ಅವರ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ ಎಂದು ಗುಡುಗಿದರು.
ಸಿದ್ಧರಾಮಯ್ಯ ಅವರ ಈ ನಡೆಯನ್ನ ನಾನು ಖಂಡಿಸುತ್ತೇನೆ. ಮುಂದೆ ದಾವುದ್ ಇಬ್ರಾಹಿಂ ಗೂ ಕಾಂಗ್ರೆಸ್ ನವರು ಭಾರತ ರತ್ನ ಕೊಡಲಿದ್ದಾರೆಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು . ಇನ್ನು
ಸಿದ್ಧರಾಮಯ್ಯ ಅವರು ಮೊದಲು ಇತಿಹಾಸವನ್ನ ಸರಿಯಾಗಿ ಓದಿಕೊಂಡು ಮಾತನಾಡಲಿ ಎಂದಿದ್ದಾರೆ.ಇದೇ ವೇಳೆಯಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಯಾವುದೇ ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ ಪೂರ್ಣಾವಧಿ ಬಿ ಜೆ ಪಿ ಸರ್ಕಾರ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಳಿಕ ಬೆಂಗಳೂರಿನಲ್ಲಿ ಮಹದಾಯಿ ಹೋರಾಟಗಾರರು ಪ್ರತಿಭಟನೆಗೆ ಕುಳಿತಿರುವುದು ನನ್ನ ಗಮನಕ್ಕೆ ಇಲ್ಲ. ಮಹದಾಯಿ ಇತ್ಯರ್ಥಕ್ಕೆ ನಮ್ಮ ಕಡೆಯಿಂದ ನಾವು ಪ್ರಯತ್ನ ಮಾಡುತ್ತಿದ್ದೇವೆ.
ಆದಷ್ಟು ಶೀಘ್ರ ಈ ವಿಚಾರ ಇತ್ಯರ್ಥಗೊಳ್ಳಲಿದೆ ಎಂದರು.

ಬೈಟ್ - ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವBody:H B GaddadConclusion:Etv hubli
Last Updated : Oct 19, 2019, 3:12 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.