ETV Bharat / state

ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರದ ಭರವಸೆ ನೀಡಿದ ಸಚಿವ ಆರ್. ಅಶೋಕ್​ - minister R Ashok visits to hubli

'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ' ಕಾರ್ಯಕ್ರಮದಡಿ ಸಚಿವ ಆರ್​. ಅಶೋಕ್​ ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದೇ ವೇಳೆ ಛಬ್ಬಿ ಗ್ರಾಮದ ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

minister R Ashok visits to  siddarud matt
ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ
author img

By

Published : Mar 20, 2021, 1:40 PM IST

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮಕ್ಕೆ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ' ಕಾರ್ಯಕ್ರಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ್​, ಗ್ರಾಮದ ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಆರ್.ಅಶೋಕ್ ಛಬ್ಬಿ ಗ್ರಾಮಕ್ಕೆ ಭೇಟಿ
ಛಬ್ಬಿ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್. ಅಶೋಕ ಅವರಿಗೆ ಗ್ರಾಮದ ಜನರು ಹಾಗೂ ಧಾರವಾಡ ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು. ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಸಚಿವರು, ಸರ್ಕಾರದ ಸೇವೆಯನ್ನು ಜನರ ಮನೆಯ ಬಾಗಿಲಿಗೆ ತರುವ ಸದುದ್ದೇಶದಿಂದ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆಗೆ ಎಂಬ ಗ್ರಾಮವಾಸ್ತವ್ಯವನ್ನು ಹಮ್ಮಿಕೊಳ್ಳಲಾಗಿದೆ. ಇದು ನನ್ನ ಎರಡನೇ ಗ್ರಾಮವಾಗಿದೆ. ಜನರಿಗೆ ಸರ್ಕಾರಿ ಸೇವೆಯನ್ನು ಮನೆ ಬಾಗಿಲಿಗೆ ಕೊಂಡೊಯ್ಯುವ ಸದುದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜನರ ಸಮಸ್ಯೆಗೆ ಇಲ್ಲಿಯೇ ಪರಿಹಾರ ನೀಡಲು ಬಂದಿದ್ದೇನೆ ಎಂದರು.
minister R Ashok visits to  siddarud matt
ಆರ್.ಅಶೋಕ್
ಕಂದಾಯ ಇಲಾಖೆ ಸೇವೆಯನ್ನು ಜನರಿಗೆ ತಲುಪಿಸುವ ಹಾಗೂ ಜನರ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ಜಿಲ್ಲಾಡಳಿತದಿಂದ ಲಿಸ್ಟ್ ತರಿಸಿಕೊಳ್ಳಲಾಗಿದ್ದು, ಅದರಲ್ಲಿ ಛಬ್ಬಿ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.