ಹುಬ್ಬಳ್ಳಿ: ನಗರದ ಗೋಕುಲ ಕೈಗಾರಿಕಾ ವಸಾಹತುವಿನ 41 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ವೀಕ್ಷಿಸಿದರು.
ಒಳಚರಂಡಿ, ಸಿಸಿ ರಸ್ತೆ ಸೇರಿದಂತೆ ಮೂಲ ಸೌಕರ್ಯಗಳ ನಿರ್ಮಾಣ ಹಂತದ ಕಾಮಗಾರಿ ಹಾಗೂ ಇಲ್ಲಿನ ಹನುಮಂತನ ನಗರದ ರಾಜಕಾಲುವೆ ಕಾಮಗಾರಿಯನ್ನು ವೀಕ್ಷಿಸಿದರು.
ಮೊದಲನೇ ಹಂತದಲ್ಲಿ 20 ಕೋಟಿ ರೂಪಾಯಿ ಹಾಗೂ ಎರಡನೇ ಹಂತದಲ್ಲಿ 21 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. 2 ತಿಂಗಳ ಒಳಗಾಗಿ ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಹೆಸ್ಕಾಂ ಜೊತೆ ಸಂಪರ್ಕಿಸಿ ನೆಲಮಟ್ಟದ ವಿದ್ಯುತ್ ಸಂಪರ್ಕಿಸುವ ಕಾರ್ಯ ಕೈಗೊಳ್ಳಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಸೂಚಿಸಿದರು.
ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ್ ಕಲಬುರಗಿ, ಪಾಲಿಕೆ ಮಾಜಿ ಸದಸ್ಯ ಮಹೇಶ್ ಬುರ್ಲಿ ,ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ್, ಹು-ಧಾ ಸ್ಮಾರ್ಟ್ ಸಿಟಿ ಕಾರ್ಯನಿರ್ವಾಹ ಅಭಿಯಂತರ ಬಸವರಾಜ ಉಪಸ್ಥಿತರಿದ್ದರು.