ETV Bharat / state

ಕಡಿಮೆ ಖರ್ಚಿನಲ್ಲಿ ವೈದ್ಯಕೀಯ ಶಿಕ್ಷಣ ನೀಡಲು ನಮ್ಮಲ್ಲಿ ಏಕೆ ಸಾಧ್ಯವಾಗುತ್ತಿಲ್ಲ?: ಶಿವರಾಮ್ ಹೆಬ್ಬಾರ್

ಮಧ್ಯಮ ವರ್ಗದ ಪೋಷಕರಿಗೆ ಕೋಟ್ಯಂತರ ರೂ. ಖರ್ಚು ಮಾಡಿ ಓದಿಸುವ ಶಕ್ತಿ ಇಲ್ಲ. ಹಾಗಾಗಿ, ಉಕ್ರೇನ್​ನಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವ್ಯಾಸಂಗ ಮಾಡಲು ಹೋಗುತ್ತಿದ್ದಾರೆ. ಕಡಿಮೆ ಖರ್ಚಿನಲ್ಲಿ ವೈದ್ಯಕೀಯ ಶಿಕ್ಷಣ ನಮ್ಮಲ್ಲಿ ಏಕೆ ಸಾಧ್ಯವಾಗುತ್ತಿಲ್ಲ ಎಂದು ಸಚಿವ ಶಿವರಾಮ್ ಹೆಬ್ಬಾರ್ ಬೇಸರ ವ್ಯಕ್ತಪಡಿಸಿದರು.

ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವರಾಮ್ ಹೆಬ್ಬಾರ್

author img

By

Published : Mar 4, 2022, 10:42 AM IST

ಹುಬ್ಬಳ್ಳಿ: ಉಕ್ರೇನ್​ನಲ್ಲಿ ಸಿಲುಕಿರುವ ಪ್ರತಿಯೊಬ್ಬ ಭಾರತೀಯರು ಸುರಕ್ಷಿತವಾಗಿ ಬರಬೇಕು. ದುರಾದೃಷ್ಟವಶಾತ್ ಹಾವೇರಿ ಜಿಲ್ಲೆಯ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಉಕ್ರೇನ್​ನಲ್ಲಿ ಕಡಿಮೆ ಖರ್ಚಿನಲ್ಲಿ ವೈದ್ಯಕೀಯ ಶಿಕ್ಷಣ ಸಿಗುತ್ತದೆ‌. ಆದರೆ, ನಮ್ಮ ದೇಶದಲ್ಲಿ ಯಾಕೆ ಇದು ಸಾಧ್ಯವಾಗುತ್ತಿಲ್ಲ ಎಂದು ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ಬೇಸರ ವ್ಯಕ್ತಪಡಿಸಿದರು.

ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಧ್ಯಮ ವರ್ಗದ ಪೋಷಕರಿಗೆ ಕೋಟ್ಯಂತರ ರೂ. ಖರ್ಚು ಮಾಡಿ ಓದಿಸುವ ಶಕ್ತಿ ಇಲ್ಲ. ಹಾಗಾಗಿ ಉಕ್ರೇನ್​ನಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವ್ಯಾಸಂಗ ಮಾಡಲು ಹೋಗುತ್ತಿದ್ದಾರೆ. ಇದು ಯಾಕೆ ನಮ್ಮ ದೇಶದಲ್ಲಿ ಸಾಧ್ಯವಾಗುತ್ತಿಲ್ಲ ಎಂಬುದು ಪಾಲಕರ ಪ್ರಶ್ನೆ ಎಂದರು.

ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವರಾಮ್ ಹೆಬ್ಬಾರ್

ನೀಟ್ ಬ್ಯಾನ್ ಮಾಡುವಂತೆ ಟ್ವಿಟರ್ ಅಭಿಯಾನ ಪ್ರಾರಂಭಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನೀಟ್ ಬಂದು ಈಗ ಒಂದು ವರ್ಷ ಆಯ್ತು. ಈ ಬಗ್ಗೆ ನರೇಂದ್ರ ಮೋದಿಯವರು ಚಿಂತನೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.