ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಸಿಎಂ ಬಿಎಸ್ವೈ ಕೊಟ್ಟ ಮಾತನಿಂತೆಯೇ ಶೇ. 99ರಷ್ಟು ನಡೆದುಕೊಂಡಿದ್ದಾರೆ. ಆದರೆ ಹೆಚ್.ವಿಶ್ವನಾಥ್ ಅವರದು ಮಾತ್ರ ಉಳಿದುಕೊಂಡಿದೆ. ಮುಂದಿನ ದಿನಗಳಲ್ಲಿ ಅವರಿಗೂ ಒಳ್ಳೆಯ ಸ್ಥಾನಮಾನ ಸಿಗಲಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಜೊತೆ ವಿಶ್ವನಾಥ್ ಮಾತನಾಡಿದ್ದಾರೆ. ಅವರು ಸಹ ಒಪ್ಪಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೂ ಅವಕಾಶ ಸಿಗಲಿದೆ. ವಿಶ್ವನಾಥ್ರಿಗೆ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ಥಾನ ನೀಡುವದು ಸಿಎಂಗೆ ಬಿಟ್ಟ ವಿಚಾರ. ನಾವು ಸಹ ಹೆಚ್.ವಿಶ್ವನಾಥ್ ಅವರನ್ನು ಸಚಿವರನ್ನಾಗಿ ಮಾಡಿ ಅಂತ ಮನವಿ ಮಾಡಬಹುದು. ಆದರೆ ಸಂಪುಟ ವಿಸ್ತರಣೆ ಮಾಡುವುದು ಸಿಎಂ ಅವರ ಪರಮಾಧಿಕಾರವಾಗಿದೆ ಎಂದರು.