ಹುಬ್ಬಳ್ಳಿ: ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅನಿರೀಕ್ಷಿತವಾಗಿ ಭೇಟಿ ನೀಡಿದರು.
ಈ ವೇಳೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ನಿರಂತರ ಅಧ್ಯಯನ ಮತ್ತು ಪರಿಶ್ರಮದಿಂದ ಸಾಧನೆ ಸಾಧ್ಯ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಹಾಗೂ ಉತ್ತಮ ಫಲಿತಾಂಶ ಪಡೆಯಲು ಸಲಹೆ ಸೂಚನೆಗಳನ್ನು ನೀಡಿದರು.
ಇನ್ನು ಈ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ. ಬಿ.ಕೆ.ಎಸ್.ವರ್ಧನ್, ಉಪ ನಿರ್ದೇಶಕ ಗಜಾನನ ಮನ್ನಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ.ಮಠಪತಿ, ಶ್ರೀಶೈಲ ಕರಿಕಟ್ಟಿ ಸೇರಿದಂತೆ ಮತ್ತಿತರರು ಇದ್ದರು.